ನಟ ಧರ್ಮೇಂದ್ರ ನಿಧನಕ್ಕೆ ಗಣ್ಯರ ಸಂತಾಪ
ನವದೆಹಲಿ, 24 ನವೆಂಬರ್ (ಹಿ.ಸ.) : ಆ್ಯಂಕರ್ : ಹಿರಿಯ ನಟ ಧರ್ಮೇಂದ್ರ ಅವರ ನಿಧನಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಅನೇಕ ಗಣ್ಯರು ಆಳವಾದ ಸಂತಾಪ ವ್ಯಕ್ತಪಡಿಸಿದ್ದಾರೆ. 89ರ ವಯಸ್ಸಿನಲ್ಲಿ ನಿ
Dharmendra


ನವದೆಹಲಿ, 24 ನವೆಂಬರ್ (ಹಿ.ಸ.) :

ಆ್ಯಂಕರ್ : ಹಿರಿಯ ನಟ ಧರ್ಮೇಂದ್ರ ಅವರ ನಿಧನಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಅನೇಕ ಗಣ್ಯರು ಆಳವಾದ ಸಂತಾಪ ವ್ಯಕ್ತಪಡಿಸಿದ್ದಾರೆ. 89ರ ವಯಸ್ಸಿನಲ್ಲಿ ನಿಧನರಾದ ಧರ್ಮೇಂದ್ರ ಅವರ ಅಗಲಿಕೆ ಭಾರತೀಯ ಚಿತ್ರರಂಗಕ್ಕೆ ತುಂಬಲಾರದ ನಷ್ಟ, ಅವರ ಸರಳತೆ, ಅಭಿನಯ ಶಕ್ತಿ ಮತ್ತು ದಶಕಗಳ ಶ್ರೇಷ್ಠ ಕೊಡುಗೆಯನ್ನು ಗಣ್ಯರು ಸ್ಮರಿಸಿದ್ದಾರೆ.

ರಾಷ್ಟ್ರಪತಿ ಮುರ್ಮು ಅವರು ಧರ್ಮೇಂದ್ರ ಹೊಸ ಪೀಳಿಗೆಯ ಕಲಾವಿದರಿಗೆ ಸ್ಫೂರ್ತಿಯಾಗಿದ್ದರು ಎಂದು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ. ಪ್ರಧಾನಿ ಮೋದಿ ಅವರು ಧರ್ಮೇಂದ್ರ ಅವರ ನಿಧನವನ್ನು ಒಂದು ಯುಗದ ಅಂತ್ಯವೆಂದು ವರ್ಣಿಸಿ, ಅವರ ನಟನೆಯ ಆಳವು ಜನಮನದಲ್ಲಿ ಅಳಿಯದ ಗುರುತು ಬಿಟ್ಟಿದೆ ಎಂದು ಹೇಳಿದರು. ಅಮಿತ್ ಶಾ, ನಿತಿನ್ ಗಡ್ಕರಿ, ಜಗತ್ ಪ್ರಕಾಶ್ ನಡ್ಡಾ, ಖರ್ಗೆ, ರಾಹುಲ್ ಗಾಂಧಿ, ಯೋಗಿ ಆದಿತ್ಯನಾಥ್ ಸೇರಿದಂತೆ ಅನೇಕರು ಸಾಮಾಜಿಕ ಜಾಲತಾಣಗಳ ಮೂಲಕ ಸಂತಾಪ ಸೂಚಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande