
ಡೆಹ್ರಾಡೂನ್, 24 ನವೆಂಬರ್ (ಹಿ.ಸ.) :
ಆ್ಯಂಕರ್ : ಉತ್ತರಾಖಂಡದ ತೆಹ್ರಿ ಜಿಲ್ಲೆಯಲ್ಲಿ ಸಂಭವಿಸಿದ ದುರ್ಘಟನೆಯಲ್ಲಿ ಕುಂಜಾಪುರಿ ದೇವಸ್ಥಾನದಿಂದ ಹಿಂತಿರುಗುತ್ತಿದ್ದ ಯಾತ್ರಿಕರ ಬಸ್ ಕಂದಕಕ್ಕೆ ಉರುಳಿ ಐವರು ಮೃತಪಟ್ಟು, 24 ಜನರು ಗಾಯಗೊಂಡಿದ್ದಾರೆ. ಋಷಿಕೇಶ–ಗಂಗೋತ್ರಿ ರಾಷ್ಟ್ರೀಯ ಹೆದ್ದಾರಿಯ ನರೇಂದ್ರನಗರ ತಾಲ್ಲೂಕಿನ ಕುಂಜಾಪುರಿ–ಹಿಂಡೋಲಖಲ್ ಬಳಿ ಘಟನೆ ನಡೆದಿದೆ.
ಬಸ್ಸಿನಲ್ಲಿ ಒಟ್ಟು 29 ಯಾತ್ರಿಕರಿದ್ದರು ಎಂದು ಮಾಹಿತಿ ದೊರೆತಿದ್ದು, ಸ್ಥಳದಲ್ಲೇ ಐವರು ಮೃತಪಟ್ಟಿದ್ದು, ಎಸ್‌ಡಿಆರ್‌ಎಫ್ ತಂಡ ಘಟನೆ ಸ್ಥಳಕ್ಕೆ ದೌಡಾಯಿಸಿ ರಕ್ಷಣಾ ಕಾರ್ಯ ನಡೆಸಿದೆ. ಮೂವರು ಗಂಭೀರ ಗಾಯಾಳುಗಳನ್ನು ಋಷಿಕೇಶದ ಏಮ್ಸ್ ಆಸ್ಪತ್ರೆಗೆ ಹಾಗೂ ನಾಲ್ವರನ್ನು ನರೇಂದ್ರನಗರ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಾಥಮಿಕ ಚಿಕಿತ್ಸೆಯ ನಂತರ 17 ಗಾಯಾಳುಗಳನ್ನು ಬಿಡುಗಡೆ ಮಾಡಲಾಗಿದೆ.
ಮಹಾರಾಷ್ಟ್ರ ಹಾಗೂ ಗುಜರಾತ್ ಸೇರಿದಂತೆ ಹಲವು ರಾಜ್ಯಗಳ ಯಾತ್ರಿಕರು ಬಸ್‌ನಲ್ಲಿ ಇದ್ದರು ಎಂದು ತಿಳಿದು ಬಂದಿದೆ. ಮೃತರ ಗುರುತು ಪತ್ತೆಹಚ್ಚುವ ಕಾರ್ಯ ಪೊಲೀಸರ ಮೂಲಕ ಮುಂದುವರಿದಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa