
ಗಂಗಾವತಿ, 24 ನವೆಂಬರ್ (ಹಿ.ಸ.) :
ಆ್ಯಂಕರ್ : `ಕರ್ನಾಟಕ ರಕ್ಷಣಾ ಯುವಗಜ ವೇದಿಕೆ'ಯು ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಸಾರ್ವಜನಿಕರಿಗೆ ಆರೋಗ್ಯ ಸೇವೆ ಒದಗಿಸುವ ಮಹತ್ತರ ಉದ್ದೇಶದೊಂದಿಗೆ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಯಶಸ್ವಿಯಾಗಿ ನೆಡೆಸಿತು.
ಶ್ರೀ ರಾಮನಗರ ಸಮುದಾಯ ಆರೋಗ್ಯ ಕೇಂದ್ರವು ಸಹಕಾರ ನೀಡಿದ್ದು, ಸಂಘಟನೆಯ ರಾಜ್ಯಾಧ್ಯಕ್ಷರಾದ ಖಾಸಿಂ ಅಲಿ ಖಾಜಾವಲಿ. ಎಚ್ ಅವರು ಶಿಬಿರದ ನೇತೃತ್ವವಹಿಸಿದ್ದರು. ಮರಳಿ ಹಾಗು ಸುತ್ತಮುತ್ತಲಿನ ಗ್ರಾಮದ ಜನರು ಆರೋಗ್ಯ ತಪಾಸ
ಣೆಗೆ ಒಳಗಾದರು.
ರಕ್ತದೊತ್ತಡ, ದಂತ ತಜ್ಞರು, ಮಧುಮೇಹ ಸೇರಿದಂತೆ ಸಾಮಾನ್ಯ ಆರೋಗ್ಯ ತಪಾಸಣೆ ಮತ್ತು ತಜ್ಞ ವೈದ್ಯರಿಂದ ಸಲಹೆ ನೀಡಲಾಯಿತು. 200ಕ್ಕೂ ಹೆಚ್ಚು ಮಂದಿ ಉಚಿತ ಔಷಧಗಳನ್ನು ಪಡೆದುಕೊಂಡರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್