
ಬಳ್ಳಾರಿ, 24 ನವೆಂಬರ್ (ಹಿ.ಸ.) :
ಆ್ಯಂಕರ್ : ಹೃದಯ ತಪಾಸಣೆಗಾಗಿ ಬಾಗಲಕೋಟೆಗೆ ಹೋಗಿದ್ದ ಕೃಷಿಕರು, ವೀರಶೈವ ಸಮಾಜದ ಮುಖಂಡ ಹಾವಿನಹಾಳು ನಾಗರಾಜು (70) ಅವರು ಸೋಮವಾರ ಮಧ್ಯಾಹ್ನ ಮೃತಪಟ್ಟಿದ್ದಾರೆ. ಮೃತರಿಗೆ ಪತ್ನಿ, ಪುತ್ರಿ, ಪುತ್ರ ಇದ್ದಾರೆ.
ಎರಡು ದಿನಗಳ ಹಿಂದೆ ಬಳ್ಳಾರಿಯಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಹೃದಯ ತಪಾಸಣೆಗೆ ಒಳಗಾಗಿದ್ದ ಹಾವಿನಹಾಳು ನಾಗರಾಜು ಅವರು ಹೆಚ್ಚಿನ ಚಿಕಿತ್ಸೆಗಾಗಿ ಬಾಗಲಕೋಟೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲ ನೀಡದೇ ಸೋಮವಾರ ಮಧ್ಯಾಹ್ನ 2.30ರ ಸುಮಾರಿಗೆ ಮೃತಪಟ್ಟಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
ಮೃತರ ಅಂತ್ಯಕ್ರಿಯೆಯು ಮಂಗಳವಾರ ಮಧ್ಯಾಹ್ನ 1 ಗಂಟೆಯ ನಂತರ ಬಳ್ಳಾರಿಯ ವೀರಶೈವ ರುದ್ರಭೂಮಿಯಲ್ಲಿ ಕುಟುಂಬದ ಸದಸ್ಯರು, ಆಪ್ತರು ಮತ್ತು ಗುರು ಹಿರಿಯರ ಸಮ್ಮುಖದಲ್ಲಿ ನೆರವೇರಲಿದೆ.
ವಿವರಗಳಿಗಾಗಿ, ಸಂಜಯ್ ಹಾವಿನಹಾಳ್, 94498 70434 ಗೆ ಸಂಪರ್ಕಿಸಿರಿ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್