
ಕೋಲಾರ, 24 ನವೆಂಬರ್ (ಹಿ.ಸ.) :
ಆ್ಯಂಕರ್ : ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ಅಬ್ಬೇನಹಳ್ಳಿ ಬಳಿ ಮಧ್ಯರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಯುವಕರು ದುರ್ಮರಣ ಹೊಂದಿದ್ದಾರೆ.
ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್ ಹೈವೇಯಲ್ಲಿ ಕಾರು ನಿಯಂತ್ರಣ ತಪ್ಪಿ ಮೊದಲು ಡಿವೈಡರ್‌ಗೆ ಡಿಕ್ಕಿ ಹೊಡೆದು, ನಂತರ ಸೇತುವೆಯಿಂದ ಕೆಳಕ್ಕೆ ಬಿದ್ದ ಪರಿಣಾಮ ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಪಘಾತದಲ್ಲಿ ಮೃತಪಟ್ಟವರು ಚೆನ್ನೈ ಮೂಲದ ಗೋಪಿ (38), ಗೌತಮ್ ರಮೇಶ್ (28), ಹರಿಹರನ್ (27), ಜಯಂಕರ್ (30) ಎಂದು ಗುರುತಿಸಲಾಗಿದೆ.
ಮಧ್ಯರಾತ್ರಿ ವೇಳೆ ವೇಗ ಅತಿ ಹೆಚ್ಚು ಇದ್ದಿರಬಹುದೆಂಬ ಪ್ರಾಥಮಿಕ ಶಂಕೆ ವ್ಯಕ್ತವಾಗಿದ್ದು, ಮಾಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa