
ಬಳ್ಳಾರಿ, 24 ನವೆಂಬರ್ (ಹಿ.ಸ.)
ಆ್ಯಂಕರ್ : ಬಳ್ಳಾರಿ ಜಿಲ್ಲಾ ನ್ಯಾಯಾಂಗ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಇವರ ಸಂಯುಕ್ತಾಶ್ರಯದಲ್ಲಿ ನಾಳೆ ಸಂಜೆ 05 ಗಂಟೆಗೆ ನ್ಯಾಯಾಲಯದ ಸಭಾಂಗಣದಲ್ಲಿ ‘ಮಹಿಳೆಯರ ಮೇಲಿನ ದೌರ್ಜನ್ಯ ನಿರ್ಮೂಲನೆಗೆ ಅಂತಾರಾಷ್ಟ್ರೀಯ ದಿನಾ’ಚರಣೆಯನ್ನು ಹಮ್ಮಿಕೊಂಡಿದೆ.
ಜಿಲ್ಲಾ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಕೆ.ಜಿ.ಶಾಂತಿ ಅವರು ಕಾರ್ಯಕ್ರಮ ಉದ್ಘಾಟಿಸುವರು.
ಸಂಪನ್ಮೂಲ ವ್ಯಕ್ತಿಗಳಾಗಿ ಜಿಲ್ಲಾ ವಕೀಲರ ಸಂಘದ ವಕೀಲರಾದ ಶಿವಲೀಲ ಅವರು ಭಾಗವಹಿಸುವರು.
ಕಾರ್ಯಕ್ರಮದಲ್ಲಿ ಜಿಲ್ಲಾ ನ್ಯಾಯಾಲಯದ ಎಲ್ಲಾ ನ್ಯಾಯಾಧೀಶರು ಹಾಗೂ ನ್ಯಾಯಾಲಯದ ಸಿಬ್ಬಂದಿ ವರ್ಗ ಉಪಸ್ಥಿತರಿರುವರು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಅವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್