
ವಿಜಯಪುರ, 24 ನವೆಂಬರ್ (ಹಿ.ಸ.):
ಆ್ಯಂಕರ್ : ವಿಜಯಪುರದ ಕೃಷಿ ಮಹಾವಿದ್ಯಾಲಯದಲ್ಲಿ ವಿಭಾಗಗಳ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ತಾತ್ಕಾಲಿಕ ನೇಮಕಾತಿಗಾಗಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗಾಗಿ ನವೆಂಬರ್ 25ರ ಬೆಳಿಗ್ಗೆ 10.30ಕ್ಕೆ ವಿಜಯಪುರದ ಕೃಷಿ ಡೀನ್ ಅವರ ಕಚೇರಿಯಲ್ಲಿ ಏರ್ಪಡಿಸಿದ ಸಂದರ್ಶನವನ್ನು ಮುಂದೂಡಲಾಗಿದೆ ಎಂದು ಕೃಷಿ ಮಹಾವಿದ್ಯಾಲಯದ ವಿದ್ಯಾಧಿಕಾರಿಗಳು ತಿಳಿಸಿದ್ದಾರೆ.
ಗುತ್ತಿಗೆ ಆಧಾರದ ಮೇಲೆ ಮೀಸಲಾತಿ ಅನ್ವಯ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿಗಾಗಿ ಧಾರವಾಡದ ಕೃಷಿ ಮಹಾವಿದ್ಯಾಲಯದಲ್ಲಿ ಸಂದರ್ಶನ ನಡೆಸಲು ನಿರ್ಧರಿಸಲಾಗಿದ್ದು,ಸಂದರ್ಶನ ದಿನಾಂಕ ಶೀಘ್ರ ತಿಳಿಸಲಾಗುವುದೆಂದೂ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಸಹಕರಿಸುವಂತೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / jyothi deshpande