ಹೈಕಮಾಂಡ್ ನಿರ್ಧಾರಕ್ಕೆ ಬದ್ದ : ಸಿದ್ದರಾಮಯ್ಯ
ಚಿಕ್ಕಬಳ್ಳಾಪುರ, 24 ನವೆಂಬರ್ (ಹಿ.ಸ.) : ಆ್ಯಂಕರ್ : ರಾಜ್ಯದಲ್ಲಿ ಅಧಿಕಾರ ಹಂಚಿಕೆ ವಿಚಾರ ಚರ್ಚೆಗೆ ಗ್ರಾಸವಾಗಿರುವ ಸಂದರ್ಭದಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಕ್ಷದ ಹೈಕಮಾಂಡ್ ತೀರ್ಮಾನದಂತೆ ತಾವು ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡೆದುಕೊಳ್ಳಬೇಕಾಗುತ್ತದೆ ಎಂದು ಸ್ಪಷ್ಟಪಡಿಸಿ
file photo


ಚಿಕ್ಕಬಳ್ಳಾಪುರ, 24 ನವೆಂಬರ್ (ಹಿ.ಸ.) :

ಆ್ಯಂಕರ್ : ರಾಜ್ಯದಲ್ಲಿ ಅಧಿಕಾರ ಹಂಚಿಕೆ ವಿಚಾರ ಚರ್ಚೆಗೆ ಗ್ರಾಸವಾಗಿರುವ ಸಂದರ್ಭದಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಕ್ಷದ ಹೈಕಮಾಂಡ್ ತೀರ್ಮಾನದಂತೆ ತಾವು ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡೆದುಕೊಳ್ಳಬೇಕಾಗುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.

ಶಿಡ್ಲಘಟ್ಟದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು, “ಅಧಿಕಾರ ಹಂಚಿಕೆ ವಿಷಯದಲ್ಲಿ ಹಾಗೂ ಸಚಿವ ಸಂಪುಟ ಪುನರ್ ರಚನೆ ವಿಚಾರದಲ್ಲಿ, ನಮ್ಮಲ್ಲಿ ಹೈ ಕಮಾಂಡ್ ಏನು ತೀರ್ಮಾನಿಸುತ್ತಾರೋ ಅದರಂತೆ ನಾನು ಹಾಗೂ ಡಿ.ಕೆ.ಶಿವಕುಮಾರ್ ಒಪ್ಪಬೇಕು. ನಾವು ಪಕ್ಷದ ವರಿಷ್ಠರ ಮಾತಿಗೆ ಬದ್ಧರಾಗಿದ್ದೇವೆ” ಎಂದು ಹೇಳಿದರು.

ಐದು ತಿಂಗಳ ಹಿಂದೆ ಹೈಕಮಾಂಡ್ ಜೊತೆ ನಡೆದ ಸಭೆಯಲ್ಲಿ ಸಚಿವ ಸಂಪುಟ ಪುನಾರಚನೆ ಕುರಿತ ಸೂಚನೆ ಬಂದಿತ್ತು , “ನಾನು ಎರಡೂವರೆ ವರ್ಷ ಪೂರ್ತಿಯಾದ ಬಳಿಕ ಮಾಡುವುದೇ ಒಳಿತು ಎಂದು ಸಲಹೆ ನೀಡಿದ್ದೆ. ಈಗ ಮರು ಸೂಚನೆ ಬಂದರೆ ಅದರಂತೆ ನಡೆಯುತ್ತೇವೆ” ಎಂದು ಸ್ಪಷ್ಟಪಡಿಸಿದರು.

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ವೇಳೆ ಸಿದ್ದರಾಮಯ್ಯ ಇಂದು ನೀಡಿರುವ ಹೇಳಿಕೆ ಕಾಂಗ್ರೆಸ್ ಪಾಳಯದಲ್ಲಿ ಚಟುವಟಿಕೆಗಳು ತೀವ್ರಗೊಂಡಿದ್ದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬೆಂಬಲಿಗ ಶಾಸಕರು ದೆಹಲಿಗೆ ತೆರಳಿದ್ದು ಹೈಕಮಾಂಡ್ ಭೇಟಿಗೆ ಪ್ರಯತ್ನ ಮುಂದುವರೆಸಿದ್ದು, ಇಂದು ವಿದೇಶದಿಂದ ರಾಹುಲ್ ಗಾಂಧಿ ಆಗಮಿಸಿದ ನಂತರ ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಕುರಿತು ಸ್ಪಷ್ಟ ಚಿತ್ರಣ ಸಿಗುವ ಸಾಧ್ಯತೆ ಇದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande