
ಮಾನವಿ, 24 ನವೆಂಬರ್ (ಹಿ.ಸ.) :
ಆ್ಯಂಕರ್ : ಜಿಲ್ಲಾ ಲೋಕಾಯುಕ್ತ ಪೊಲೀಸ್ ಇಲಾಖೆಯಿಂದ ನವೆಂಬರ್ 28ರ ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಗೆವರೆಗೆ ರಾಯಚೂರಿನ ಮಾನವಿ ತಾಲೂಕಿನ ತಹಸೀಲ್ದಾರ್ ಕಚೇರಿಯ ಸಭಾಂಗಣದಲ್ಲಿ ಸಾರ್ವಜನಿಕರ ಕುಂದುಕೊರತೆ ಹಾಗೂ ಅಹವಾಲುಗಳ ಸಭೆ ಆಯೋಜಿಸಲಾಗಿದ್ದು, ಸಾರ್ವಜನಿಕರಿಗೆ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಕರ್ನಾಟಕ ಲೋಕಾಯುಕ್ತ ಪೋಲೀಸ್ ಉಪಾಧೀಕ್ಷಕರ ಕಚೇರಿ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್