ಸಂವಿಧಾನ ದಿನಾಚರಣೆಯಲ್ಲಿ ಹೆಚ್ಚಿನ ಜನರು ಪಾಲ್ಗೊಳ್ಳಿ : ಜಿಲ್ಲಾಧಿಕಾರಿ
ಕೊಪ್ಪಳ, 24 ನವೆಂಬರ್ (ಹಿ.ಸ.) : ಆ್ಯಂಕರ್ : ಸಂವಿಧಾನ ದಿನಾಚರಣೆಯಲ್ಲ್ಲಿ ಎಲ್ಲರ ಪಾಲ್ಗೊಳ್ಳುವಿಕೆ ಅತ್ಯವಶ್ಯಕವಾಗಿದ್ದು, ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳು, ಅಧಿಕಾರಿ ಮತ್ತು ಸಿಬ್ಬಂದಿ, ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು, ಸಂಘ-ಸಂಸ್ಥೆಗಳ ಮುಖಂಡರುಗಳು ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಪ
ಸಂವಿಧಾನ ದಿನಾಚರಣೆಯಲ್ಲಿ ಹೆಚ್ಚಿನ ಜನರು ಪಾಲ್ಗೊಳ್ಳಿ  : ಜಿಲ್ಲಾಧಿಕಾರಿ


ಸಂವಿಧಾನ ದಿನಾಚರಣೆಯಲ್ಲಿ ಹೆಚ್ಚಿನ ಜನರು ಪಾಲ್ಗೊಳ್ಳಿ  : ಜಿಲ್ಲಾಧಿಕಾರಿ


ಕೊಪ್ಪಳ, 24 ನವೆಂಬರ್ (ಹಿ.ಸ.) :

ಆ್ಯಂಕರ್ : ಸಂವಿಧಾನ ದಿನಾಚರಣೆಯಲ್ಲ್ಲಿ ಎಲ್ಲರ ಪಾಲ್ಗೊಳ್ಳುವಿಕೆ ಅತ್ಯವಶ್ಯಕವಾಗಿದ್ದು, ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳು, ಅಧಿಕಾರಿ ಮತ್ತು ಸಿಬ್ಬಂದಿ, ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು, ಸಂಘ-ಸಂಸ್ಥೆಗಳ ಮುಖಂಡರುಗಳು ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಪಾಲ್ಗೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಅವರು ಹೇಳಿದ್ದಾರೆ.

ಅವರು ಸೋಮವಾರ ಕೊಪ್ಪಳ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನವೆಂಬರ್ 26ರ ಸಂವಿಧಾನ ದಿನಾಚರಣೆ ಆಚರಿಸುವ ಕುರಿತು ಕರೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.

ಪ್ರತಿ ವರ್ಷದಂತೆ ಈ ವರ್ಷವೂ ಸಹ ನವೆಂಬರ್ 26ರಂದು ಸಂವಿಧಾನ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಸಂವಿಧಾನ ದಿನಾಚರಣೆ ನಿಮಿತ್ತ ಜಾಥಾ ಕಾರ್ಯಕ್ರಮವು ಅಂದು ಬೆಳಿಗ್ಗೆ 8.30ಕ್ಕೆ ತಾಲ್ಲೂಕು ಕ್ರೀಡಾಂಗಣದಿಂದ ಆರಂಭಗೊಂಡು ಅಶೋಕ ವೃತ್ತದ ಮಾರ್ಗವಾಗಿ ಜಿಲ್ಲಾಡಳಿತ ಭವನದ ವರೆಗೆ ನಡೆಯಲಿದೆ.

ಅಂದು ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‍ನಲ್ಲಿ ವೇದಿಕೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿದ್ದು, ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವ ಮೂಲಕ ಸಂವಿಧಾನ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಬೇಕು ಎಂದರು.

ಈ ಕಾರ್ಯಕ್ರಮವನ್ನು ಶಿಷ್ಠಾಚಾರ ಪಾಲನೆಯೊಂದಿಗೆ ಅಚ್ಚುಕಟ್ಟಾಗಿ ಆಯೋಜನೆ ಮಾಡಲು ಸಮಾಜ ಕಲ್ಯಾಣ ಇಲಾಖೆ ಮತ್ತು ಸಂಬಂಧಪಟ್ಟ ಕ್ರಮ ಕೈಗೊಳ್ಳಬೇಕು. ಸಂವಿಧಾನ ದಿನಾಚರಣೆಯ ಅಂಗವಾಗಿ ಶಾಲಾ ಮಕ್ಕಳಿಗೆ ಪ್ರಬಂಧ ಮತ್ತು ಚಿತ್ರಕಲೆ ಸ್ಪರ್ಧೆಗಳನ್ನು ಹಮ್ಮಿಕೊಂಡಿದ್ದು, ವಿಜೇತ ಮಕ್ಕಳಿಗೆ ಪ್ರಮಾಣ ಪತ್ರಗಳನ್ನು ನೀಡಿ ಸನ್ಮಾನಿಸಬೇಕು. ಸಂವಿಧಾನ ದಿನಾಚರಣೆಯ ಜಾಥಾ ಮತ್ತು ವೇದಿಕೆ ಕಾರ್ಯಕ್ರಮದಲ್ಲಿ ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳ ಪಾಲ್ಗೊಳ್ಳುವಿಕೆಯೂ ಸಹ ಅಗತ್ಯವಾಗಿದೆ. ಕಾರ್ಯಕ್ರಮ ದಿನದಂದು ಎಲ್ಲಾ ಶಾಲೆಗಳಲ್ಲಿ ಶಿಕ್ಷಕರು ಸಂವಿಧಾನ ಪೀಠಿಕೆಯನ್ನು ಓದಿ ಮಕ್ಕಳಿಗೆ ತಿಳಿಸಬೇಕು. ಈ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಸಂವಿಧಾನ ದಿನಾಚರಣೆಯ ಕಾರ್ಯಕ್ರಮವನ್ನು ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿಯೂ ಹಮ್ಮಿಕೊಳ್ಳಲು ಆಯಾ ತಹಶೀಲ್ದಾರರು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದರು ಸೂಚನೆ ನೀಡಿದರು.

ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಅಜ್ಜಪ್ಪ ಸೋಗಲದ ಅವರು ಮಾತನಾಡಿ, ಸರ್ಕಾರದ ಆದೇಶದಂತೆ ಈಗಾಗಲೇ ಚಿತ್ರಕಲೆ ಮತ್ತು ಭಾಷಣ ಸ್ಪರ್ಧೆಗಳನ್ನು ಹಮ್ಮಿಕೊಂಡು ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳ ಪಟ್ಟಿಯನ್ನು ರಾಜ್ಯಮಟ್ಟದ ಸ್ಪರ್ಧೆಗೆ ಕಳುಹಿಸಲಾಗಿದೆ. `ನಮ್ಮ ಮತ ನಮ್ಮ ಹಕ್ಕು' ಸಂವಿಧಾನದ ಪೀಠಿಕೆ ಕುರಿತು ಮಕ್ಕಳಿಗೆ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿತ್ತು. ಪ್ರಥಮ, ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದ ಮಕ್ಕಳಿಗೆ ಕಾರ್ಯಕ್ರಮದಲ್ಲಿ ಪ್ರಮಾಣ ಪತ್ರ ನೀಡಿ ಸನ್ಮಾನಿಸಲಾಗುವುದು. ಶಿಷ್ಠಾಚಾರದ ಪ್ರಕಾರ ಈ ಕಾರ್ಯಕ್ರಮದಲ್ಲಿ ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಸೇರಿದಂತೆ ಇತರೆ ಜನಪ್ರತಿನಿಧಿಗಳು ಮತ್ತು ವಿವಿಧ ಸಂಘ ಸಂಸ್ಥೆಗಳು ಹಾಗೂ ಸಾರ್ವಜನಿಕರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಕೊಪ್ಪಳ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಂಜುನಾಥ ಗುಂಡುರು, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆಯ ಉಪ ನಿರ್ದೇಶಕ ಸೋಮಶೇಖರ್ ಗೌಡ ಪಾಟೀಲ, ಆಹಾರ ಇಲಾಖೆ ಉಪ ನಿರ್ದೇಶಕ ಸೋಮಶೇಖರ್ ಬಿರಾದಾರ, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ನಾಗರಾಜ ಜುಮ್ಮಣ್ಣನವರ್ ಹಾಗೂ ವಿವಿಧ ಸಂಘಟನೆಗಳ ಮುಖಂಡರಾದ ಶಾಂತಕುಮಾರ ಸೋಮಾಪುರು, ಗವಿಸಿದ್ದಪ್ಪ ಬೆಲ್ಲದ, ಕೃಷ್ಣ ಇಟ್ಟಂಗಿ, ಪ್ರಕಾಶ ಹೆಚ್. ಹೋಳೆಯಪ್ಪನವರ್, ಸಿದ್ರಾಮ ಹೊಸಮನಿ, ನಾಗರಾಜ ಬೆಲ್ಲದ, ಕಾಶಪ್ಪ ಚಲವಾದಿ, ಸಂಜಯ ದಾಸ ಚನ್ನದಾಸರ, ಹನುಮಂತ ಹ್ಯಾಟಿ, ಗವಿಸಿದ್ದಪ್ಪ ಹೊಸಲಿಂಗಾಪುರ, ಶಿವರಾಜ ಹೊಸಮನಿ, ಕಮಲ್ ಸಾಬ ಒಂಟಿ, ಮಂಜುನಾಥ ಬಿಳೆಎಲಿ ಸೇರಿದಂತೆ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande