



ಬಳ್ಳಾರಿ, 24 ನವೆಂಬರ್ (ಹಿ.ಸ.) :
ಆ್ಯಂಕರ್ : ಬಳ್ಳಾರಿ ಮಹಾನಗರ ಪಾಲಿಕೆಯ ನೂತನ ಮೇಯರ್ ಆಗಿ ಪಿ. ಗಾದೆಪ್ಪ ಅವರು ಸೋಮವಾರ ಅಧಿಕಾರ ಸ್ವೀಕರಿಸಿದ್ದಾರೆ.
ಬಳ್ಳಾರಿ ನಗರದ ಅಧಿದೇವತೆ ಶ್ರೀ ಕನಕ ದುರ್ಗಮ್ಮ ದೇವಸ್ಥಾನದಿಂದ ತಮ್ಮ ಬೆಂಬಲಿಗರ ಜೊತೆಯಲ್ಲಿ ಮೆರವಣಿಗೆಯಲ್ಲಿ ಪಾಲಿಕೆಯ ಕಚೇರಿಗೆ ಕಾಲ್ನಡಿಗೆಯಲ್ಲಿ ಆಗಮಿಸಿದ ಪಿ. ಗಾದೆಪ್ಪ ಅವರು, ಕಲ್ಯಾಣ ಸ್ವಾಮಿ ಮಠದ ಶ್ರೀಗಳು ಮತ್ತು ಹಿರಿಯರ ಸಮಕ್ಷಮದಲ್ಲಿ ಅಧಿಕಾರ ಸ್ವೀಕರಿಸಿ, ಆಶೀರ್ವಾದ ಪಡೆದರು.
ನೂತನ ಮೇಯರ್ ಆಗಿ ಅಧಿಕಾರ ಸ್ವೀಕರಿಸಿದ ಪಿ. ಗಾದೆಪ್ಪ ಅವರು, ಕಾಂಗ್ರೆಸ್ ಪಕ್ಷಕ್ಕೆ ಸುದೀರ್ಘ ಕಾಲದ ನಿಷ್ಠೆ ಮತ್ತು ಜನಸೇವೆಯನ್ನು ಗುರುತಿಸಿ ಪಕ್ಷದ ಕಾಂಗ್ರೆಸ್ ಕಾರ್ಪೊರೇಟರುಗಳು ನನ್ನನ್ನು ಒಮ್ಮತದಿಂದ ಬೆಂಬಲಿಸಿ, ಚುನಾಯಿಸಿದ್ದಾರೆ. ಉತ್ತಮವಾದ - ಜನಪರವಾದ ಆಡಳಿತವನ್ನು ನೀಡುವೆ ಎಂದು ಹೇಳಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಲ್ಲಂ ಪ್ರಶಾಂತ್, ಪಾಲಿಕೆಯ ಆಯುಕ್ತರಾದ ಪಿ.ಎಸ್. ಮಂಜುನಾಥ್ ಹಾಗೂ ಪಾಲಿಕೆಯ ಸದಸ್ಯರು, ಕಾಂಗ್ರೆಸ್ ಪಕ್ಷದ ಗಣ್ಯರು - ಕಾರ್ಯಕರ್ತರು ಹಾಗೂ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್