
ವಿಜಯಪುರ, 24 ನವೆಂಬರ್ (ಹಿ.ಸ.) :
ಆ್ಯಂಕರ್ : ಎಲೆಕ್ಟ್ರಿಕ್ ಕಾರಿನಲ್ಲಿ ಏಕಾಏಕಿ ಬೆಂಕಿ ಅವಘಡ ಸಂಭವಿಸಿ, ಧಗಧಗನೇ ಹೊತ್ತಿ ಉರಿದಿರುವ ಘಟನೆ ವಿಜಯಪುರ ನಗರದ ಸೈನಿಕ ಸ್ಕೂಲ್ ಬಳಿ ನಡೆದಿದೆ. ಪಾರ್ಕ್ ಮಾಡಿದ್ದ ಇವಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಯಾವುದೇ ಪ್ರಾಣ ಹಾನಿಯಾಗಿಲ್ಲ.
TS 07- UF 6410 ನೋಂದಣಿ ಸಂಖ್ಯೆಯ ಮಹೀಂದ್ರಾ ವೆರಿಟೋ ಕಾರ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಕಾರು ಭಸ್ಮವಾಗಿದೆ. ಇನ್ನೂ
ಮೊಹಮ್ಮದಗೌಸ್ ಮುಲ್ಲಾ ಎಂಬುವವರಿಗೆ ಸೇರಿದ ಕಾರು ಇದಾಗಿದೆ.
ಘಟನೆಗೆ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಆಗಮಿಸಿ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸಿದರು.
ಗಾಂಧಿಚೌಕ್ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಹಿಂದೂಸ್ತಾನ್ ಸಮಾಚಾರ್ / jyothi deshpande