
ಗದಗ, 24 ನವೆಂಬರ್ (ಹಿ.ಸ.) :
ಆ್ಯಂಕರ್ : ನವೆಂಬರ್ 26 ರಂದು ಸಂವಿಧಾನ ದಿನಾಚರಣೆಯ ಪ್ರಯುಕ್ತ ಬುದುವಾರ ಬೆಳಿಗ್ಗೆ 8 ಗಂಟೆಗೆ ಗದಗ ನಗರಸಭೆಯ ಆವರಣದಲ್ಲಿರುವ ಸಂವಿಧಾನ ಶಿಲ್ಪಿ ಡಾ||ಬಿ.ಆರ್ ಅಂಬೇಡ್ಕರ ರವರ ಮೂರ್ತಿಗೆ ಮಾಲಾರ್ಪಣೆ ಮಾಡುವುದರೊಂದಿಗೆ ನಗರ ಸಭೆಯಿಂದ ಜಿಲ್ಲಾಡಳಿತ ಭವನದವರೆಗೆ ಮೆರವಣಿಗೆ ಜಾಥಾ ಹಮ್ಮಿಕೊಳ್ಳಲಾಗುವುದು,
ಬೆಳಗ್ಗೆ 11 ಗಂಟೆಗೆ ಜಿಲ್ಲಾಡಳಿತ ಭವನದ ಅಡಿಟೋರಿಯಮ್ ಹಾಲ್‌ನಲ್ಲಿ ವೇದಿಕೆ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವ ಕಾರಣ ಮೆರವಣಿಗೆ ಹಾಗೂ ವೇದಿಕೆ ಕಾರ್ಯಕ್ರಮಗಳಲ್ಲಿ ಗೌರವಾನ್ವಿತ ಜನಪ್ರತಿನಿದಿಗಳು, ಎಲ್ಲಾ ಜಿಲ್ಲಾಮಟ್ಟದ ಅಧಿಕಾರಿಗಳು, ತಾಲೂಕು ಮಟ್ಟದ ಅಧಿಕಾರಿಗಳು, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ, /ಹಿಂದುಳಿದ ವರ್ಗ/ಅಲ್ಪಸಂಖ್ಯಾತ ವರ್ಗಗಳ ಸಮಾಜದ ಮುಖಂಡರು, ಸರ್ವಸದಸ್ಯರು, ಗಣ್ಯ ವ್ಯಕ್ತಿಗಳು, ಸಂಘ ಸಂಸ್ಥೆಯ ಪದಾಧಿಕಾರಿಗಳು ಸಂವಿಧಾನ ದಿನಾಚಣೆಯ ಕಾಯಕ್ರಮಗಳಲ್ಲಿ ಭಾಗವಹಿಸುವಂತೆ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಡಾ. ನಂದಾ ಹಣಬರಟ್ಟಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹಿಂದೂಸ್ತಾನ್ ಸಮಾಚಾರ್ / lalita MP