
ರಾಯಚೂರು, 24 ನವೆಂಬರ್ (ಹಿ.ಸ.) :
ಆ್ಯಂಕರ್ : ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ 2025–26ನೇ ಸಾಲಿನ ಐದನೇ ಕಂತಿನ ಅನುದಾನದಲ್ಲಿ ಒಟ್ಟು ರೂ. 89,74,82,000, ಗಳ ಮೊತ್ತವನ್ನು ರಾಯಚೂರು ಜಿಲ್ಲೆಯ 4,48,741 ಫಲಾನುಭವಿಗಳಿಗೆ ಬಿಡುಗಡೆ ಮಾಡುವ ಪ್ರಕ್ರಿಯೆಯು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಮೂಲಕ ಚಾಲ್ತಿ ಮಾಡಲಾಗಿದೆ.
ಮುಂದಿನ ಎರಡು–ಮೂರು ದಿನಗಳೊಳಗೆ ಈ ಅನುದಾನ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಜಮಾ ಆಗಲಿದೆ ಎಂದು ಜಿಲ್ಲಾಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರ ಸಮಿತಿಯ ಮಾನ್ಯ ಅಧ್ಯಕ್ಷರಾದ ಪಾಮಯ್ಯ ಮುರಾರಿ ಅವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್