ಬೆಂಗಳೂರಿನಲ್ಲಿ ರಸ್ತೆ ಗುಂಡಿ ಸಮಸ್ಯೆ : ಬಿಜೆಪಿ ಪ್ರತಿಭಟನೆ
ಬೆಂಗಳೂರು, 24 ನವೆಂಬರ್ (ಹಿ.ಸ.) : ಆ್ಯಂಕರ್ : ಬೆಂಗಳೂರಿನ ರಸ್ತೆಗಳಲ್ಲಿ ಹೆಚ್ಚುತ್ತಿರುವ ಗುಂಡಿ ಸಮಸ್ಯೆ ಬಗೆಹರಿಸಲು ಆಗ್ರಹಿಸಿ ಪ್ರತಿಪಕ್ಷ ನಾಯಕ ಆರ್. ಅಶೋಕ್. ಇಂದು ವಿಧಾನಸೌಧ ಮುಂಭಾಗದಲ್ಲಿರುವ ಗುಂಡಿಯಲ್ಲಿ ದೋಣಿ ತೇಲಿಸುವ ಮೂಲಕ ಪ್ರತಿಭಟನೆ ನಡೆಸಿದರು. ಈ ವೇಳೆ ಮಾತನಾಡಿದ ಅವರು, “ಬ್ರ್ಯಾಂ
Protest


ಬೆಂಗಳೂರು, 24 ನವೆಂಬರ್ (ಹಿ.ಸ.) :

ಆ್ಯಂಕರ್ : ಬೆಂಗಳೂರಿನ ರಸ್ತೆಗಳಲ್ಲಿ ಹೆಚ್ಚುತ್ತಿರುವ ಗುಂಡಿ ಸಮಸ್ಯೆ ಬಗೆಹರಿಸಲು ಆಗ್ರಹಿಸಿ ಪ್ರತಿಪಕ್ಷ ನಾಯಕ ಆರ್. ಅಶೋಕ್. ಇಂದು ವಿಧಾನಸೌಧ ಮುಂಭಾಗದಲ್ಲಿರುವ ಗುಂಡಿಯಲ್ಲಿ ದೋಣಿ ತೇಲಿಸುವ ಮೂಲಕ ಪ್ರತಿಭಟನೆ ನಡೆಸಿದರು.

ಈ ವೇಳೆ ಮಾತನಾಡಿದ ಅವರು, “ಬ್ರ್ಯಾಂಡ್ ಬೆಂಗಳೂರನ್ನು ಗುಂಡಿಗಳೂರಾಗಿ ಮಾಡಿದೆ ಭ್ರಷ್ಟ ಕಾಂಗ್ರೆಸ್ ಸರ್ಕಾರ” ಎಂದು ಆಕ್ರೋಶ ವ್ಯಕ್ತಪಡಿಸಿ, ಜನರ ಜೀವ ಹೋಗುತ್ತಿದ್ದರೂ ಸರ್ಕಾರ ಮೌನವಾಗಿದ್ದು ಗುಂಡಿಗಳನ್ನು ಸರಿಪಡಿಸಲು ಸಂಪೂರ್ಣ ವಿಫಲವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ವಿಧಾನ ಪರಿಷತ್‌ ಪ್ರತಿಪಕ್ಷದ ನಾಯಕ ಚಲವಾದಿ ನಾರಾಯಣಸ್ವಾಮಿ, ಮುಖ್ಯ ಸಚೇತಕ ನಾರಾಯಣಗೌಡ, ರಾಜ್ಯ ಕಾರ್ಯದರ್ಶಿ ಶರಣು ತಳ್ಳಿಕೇರಿ ಸೇರಿದಂತೆ ಬಿಜೆಪಿ ಪದಾಧಿಕಾರಿಗಳು ಹಾಗೂ ನೂರಾರು ಕಾರ್ಯಕರ್ತರು ಭಾಗವಹಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande