ಮೆಕ್ಕೆಜೋಳ ಬೆಂಬಲ ಬೆಲೆ ಖರೀದಿಗೆ ಆಗ್ರಹಿಸಿ ನಡೆಯುತ್ತಿದ್ದ ಸತ್ಯಾಗ್ರಹ ಅಂತ್ಯ
ಧಾರವಾಡ, 24 ನವೆಂಬರ್ (ಹಿ.ಸ.) : ಆ್ಯಂಕರ್ : ಮೆಕ್ಕೆಜೋಳ ಬೆಂಬಲ ಬೆಲೆ ಖರೀದಿಗೆ ಒತ್ತಾಯಿಸಿ ಧಾರವಾಡ ಜಿಲ್ಲೆಯ ನವಲಗುಂದದಲ್ಲಿ ಮೂರು ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ರೈತರು, ಶಾಸಕ ಎನ್.ಎಚ್. ಕೋನರಡ್ಡಿ ಮತ್ತು ಜಿಲ್ಲಾಧಿಕಾರಿ ದಿವ್ಯ ಪ್ರಭು ನೀಡಿದ ಭರವಸೆಯ ಮೇಲೆ ಇಂದು ಸತ್ಯಾಗ್ರಹವನ್ನು
Protest end


ಧಾರವಾಡ, 24 ನವೆಂಬರ್ (ಹಿ.ಸ.) :

ಆ್ಯಂಕರ್ : ಮೆಕ್ಕೆಜೋಳ ಬೆಂಬಲ ಬೆಲೆ ಖರೀದಿಗೆ ಒತ್ತಾಯಿಸಿ ಧಾರವಾಡ ಜಿಲ್ಲೆಯ ನವಲಗುಂದದಲ್ಲಿ ಮೂರು ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ರೈತರು, ಶಾಸಕ ಎನ್.ಎಚ್. ಕೋನರಡ್ಡಿ ಮತ್ತು ಜಿಲ್ಲಾಧಿಕಾರಿ ದಿವ್ಯ ಪ್ರಭು ನೀಡಿದ ಭರವಸೆಯ ಮೇಲೆ ಇಂದು ಸತ್ಯಾಗ್ರಹವನ್ನು ಅಂತ್ಯಗೊಳಿಸಿದರು.

ಸತ್ಯಾಗ್ರಹ ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಎನ್.ಎಚ್.ಕೋನರೆಡ್ಡಿ “ಗೋವಿನ ಜೋಳ ಖರೀದಿಗೆ ಸರ್ಕಾರ ಬದ್ಧ. ತಾಂತ್ರಿಕ ತೊಂದರೆ ನಿವಾರಣೆಗೆ ಕೃಷಿ ಸಚಿವರು ದೆಹಲಿಗೆ ಭೇಟಿ ನೀಡಿದ್ದಾರೆ. ಶೀಘ್ರದಲ್ಲೇ ಖರೀದಿ ಕೇಂದ್ರ ಆರಂಭವಾಗಲಿದೆ,” ಎಂದು ತಿಳಿಸಿದರು.

ಇದೇ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ದಿವ್ಯ ಪ್ರಭು “ಮೆಕ್ಕೆಜೋಳ ಖರೀದಿಗೆ ಸರ್ಕಾರ ಮಟ್ಟದಲ್ಲಿ ಕ್ರಮ ನಡೆಯುತ್ತಿದೆ, ತಾಂತ್ರಿಕ ಸಮಸ್ಯೆಗಳೂ ಬೇಗ ಪರಿಹಾರವಾಗುತ್ತವೆ,” ಎಂದು ಭರವಸೆ ನೀಡಿದರು.

ಹೆಸರು ಕಾಳು ಗುಣಮಟ್ಟದ ಸಮಸ್ಯೆ ರಾಜ್ಯ–ಕೇಂದ್ರಗಳ ಗಮನಕ್ಕೆ ತರಲಾಗಿದ್ದು ಶೀಘ್ರ ಪರಿಹಾರ ಸಿಗಲಿದೆ ಎಂದು ತಿಳಿಸಿದರು.

ರೈತ ನಾಯಕರು ಅಧಿಕಾರಿಗಳ ಭರವಸೆಗೆ ಕಾಲಾವಕಾಶ ನೀಡಿದ್ದು, “ಪರಿಹಾರವಾಗದಿದ್ದರೆ ಹೋರಾಟ ಪ್ರಾರಂಭಿಸಲಾವುದು ಎಂದು ಎಚ್ಚರಿಕೆ ನೀಡಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande