ಹಿಂದಿ ಚಿತ್ರರಂಗದ ಹಿರಿಯ ನಟ ಧರ್ಮೇಂದ್ರ ಇನ್ನಿಲ್ಲ
ಮುಂಬಯಿ, 24 ನವೆಂಬರ್ (ಹಿ.ಸ.) : ಆ್ಯಂಕರ್ : ಭಾರತೀಯ ಚಿತ್ರರಂಗದಲ್ಲಿ ಅಪಾರ ಅಭಿಮಾನಿಗಳನ್ನು ಗಳಿಸಿದ ಹಿರಿಯ ನಟ ಧರ್ಮೇಂದ್ರ (89) ಇಂದು ಮುಂಬೈನಲ್ಲಿ ನಿಧನರಾಗಿದ್ದಾರೆ. ವಯೋಸಹಜ ಖಾಯಿಲೆಯಿಂದ ಚಿಕಿತ್ಸೆಯನ್ನು ಪಡೆಯುತ್ತಿದ್ದ ಅವರು ಇಂದು ಇಹ ಲೋಕ ತ್ಯಜಿಸಿದ್ದಾರೆ. ಈ ತಿಂಗಳ ಆರಂಭದಲ್ಲಿ ಧರ್ಮೇಂದ್ರ
Dharmendr


ಮುಂಬಯಿ, 24 ನವೆಂಬರ್ (ಹಿ.ಸ.) :

ಆ್ಯಂಕರ್ : ಭಾರತೀಯ ಚಿತ್ರರಂಗದಲ್ಲಿ ಅಪಾರ ಅಭಿಮಾನಿಗಳನ್ನು ಗಳಿಸಿದ ಹಿರಿಯ ನಟ ಧರ್ಮೇಂದ್ರ (89) ಇಂದು ಮುಂಬೈನಲ್ಲಿ ನಿಧನರಾಗಿದ್ದಾರೆ. ವಯೋಸಹಜ ಖಾಯಿಲೆಯಿಂದ ಚಿಕಿತ್ಸೆಯನ್ನು ಪಡೆಯುತ್ತಿದ್ದ ಅವರು ಇಂದು ಇಹ ಲೋಕ ತ್ಯಜಿಸಿದ್ದಾರೆ.

ಈ ತಿಂಗಳ ಆರಂಭದಲ್ಲಿ ಧರ್ಮೇಂದ್ರ ಅವರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡ ಬಳಿಕ ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರೋಗ್ಯದಲ್ಲಿ ಸುಧಾರಣೆ ಕಂಡು ಬಂದ ಹಿನ್ನೆಲೆಯಲ್ಲಿ ಅವರನ್ನು ಮನೆಗೆ ಕರೆದುಕೊಂಡು ಬರಲಾಗಿತ್ತು.

ಡಿಸೆಂಬರ್ 8ರಂದು ತಮ್ಮ 90ನೇ ಜನ್ಮದಿನವನ್ನು ಆಚರಿಸಿಕೊಳ್ಳಬೇಕಾಗಿದ್ದ ಧರ್ಮೇಂದ್ರ ಅವರ ನಿಧನವು ಕಲಾ ಲೋಕಕ್ಕೆ ನಷ್ಟವಾಗಿದೆ.

300ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟನೆ ಮೂಲಕ ಪ್ರೇಕ್ಷಕರ ಮನಸ್ಸು ಗೆದ್ದಿದ್ದ ಧರ್ಮೇಂದ್ರ ಅವರು ಆಕ್ಷನ್, ರೊಮ್ಯಾನ್ಸ್, ಫ್ಯಾಮಿಲಿ ಡ್ರಾಮಾ ಎಲ್ಲ ವರ್ಗಗಳಲ್ಲೂ ಸಮಾನವಾಗಿ ಮೆರೆದಿದ್ದರು. ಇಳಿವಯಸ್ಸಿನಲ್ಲಿಯೂ ನಟನೆಯನ್ನು ನಿಲ್ಲಿಸದೇ ಚಿಕ್ಕಪುಟ್ಟ ಪಾತ್ರಗಳಲ್ಲಿ ಕಾಣಿಸಿಕೊಂಡು ತಮ್ಮ ಸಕ್ರಿಯತೆಯನ್ನು ಮುಂದುವರೆಸಿದ್ದರು.

ನಟನಾಗಿ ಮಾತ್ರವಲ್ಲದೆ ನಿರ್ಮಾಪಕರಾಗಿಯೂ ಅವರು ಹಿಂದಿ ಸಿನಿಮಾ ಕ್ಷೇತ್ರಕ್ಕೆ ಮಹತ್ವದ ಕೊಡುಗೆ ನೀಡಿದ್ದಾರೆ.

ರಾಜಕೀಯದಲ್ಲೂ ವಿಶೇಷ ಗುರುತು:

2004ರಲ್ಲಿ ಭಾರತೀಯ ಜನತಾ ಪಕ್ಷದಿಂದ ಲೋಕ ಸಭೆಗೆ ಆಯ್ಕೆಯಾಗಿದ್ದ ಅವರು 2009ರವರೆಗೆ ಸಂಸದರಾಗಿದ್ದರು.

ಗಣ್ಯರ ಸಂತಾಪ:

ನಟರು, ರಾಜಕಾರಣಿಗಳು, ಕ್ರೀಡಾ ಕ್ಷೇತ್ರದ ಗಣ್ಯರು ಮತ್ತು ಲಕ್ಷಾಂತರ ಅಭಿಮಾನಿಗಳು ಧರ್ಮೇಂದ್ರ ಅವರ ಅಗಲಿಕೆಗೆ ಕಂಬನಿ ಮಿಡಿದಿದ್ದಾರೆ. ಅವರ ಸೇವೆ, ಸರಳತೆ ಮತ್ತು ಕಲೆಗೆ ಮಾಡಿದ ನಿಷ್ಠೆ ಭಾರತೀಯ ಸಿನಿಮಾ ಇತಿಹಾಸದಲ್ಲಿ ಸದಾ ನೆನಪಾಗಿರಲಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande