ನೇತ್ರ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನ
ಹೊಸಪೇಟೆ, 25 ನವೆಂಬರ್ (ಹಿ.ಸ.) : ಆ್ಯಂಕರ್ : 2025-26ನೇ ಸಾಲಿನ ರಾಷ್ಟ್ರೀಯ ಅಂಧತ್ವ ನಿಯಂತ್ರಣಾ ಕಾರ್ಯಕ್ರಮದಡಿ ಆಶಾಕಿರಣ ದೃಷ್ಟಿ ಕೇಂದ್ರಕ್ಕೆ ನೇತ್ರ ಸಹಾಯಕರನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಅಂಧತ್ವ ನಿಯಂತ್ರಣಾಧಿಕಾರಿ ತಿಳಿಸಿ
ನೇತ್ರ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನ


ಹೊಸಪೇಟೆ, 25 ನವೆಂಬರ್ (ಹಿ.ಸ.) :

ಆ್ಯಂಕರ್ : 2025-26ನೇ ಸಾಲಿನ ರಾಷ್ಟ್ರೀಯ ಅಂಧತ್ವ ನಿಯಂತ್ರಣಾ ಕಾರ್ಯಕ್ರಮದಡಿ ಆಶಾಕಿರಣ ದೃಷ್ಟಿ ಕೇಂದ್ರಕ್ಕೆ ನೇತ್ರ ಸಹಾಯಕರನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಅಂಧತ್ವ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

ಅರ್ಜಿ ಸಲ್ಲಿಸುವವರು ಆಪೆÇ್ಟೀಮೆಟ್ರಿಯಲ್ಲಿ ಎರಡು ವರ್ಷಗಳ ಡಿಪೆÇ್ಲೀಮಾ ಅಥವಾ ನೇತ್ರ ಸಹಾಯಕರಾಗಿ ಪಿಎಂಓಎ ಮಾನ್ಯತೆ ಪಡೆದ ಸರ್ಕಾರಿ ಆಸ್ಪತ್ರೆಗಳಲ್ಲಿ ಎನ್‍ಪಿಸಿಬಿ ನಿಯಾಮಾನುಸಾರ ತರಬೇತಿ ಪಡೆದಿರಬೇಕು. ಮತ್ತು ಬೇಸಿಕ್ ಕಂಪ್ಯೂಟರ್ ಕೋಸ್ರ್ನಲ್ಲಿ ಕಡ್ಡಾಯವಾಗಿ ಉತ್ತೀರ್ಣರಾಗಿರಬೇಕು.

ಪರಿಶಿಷ್ಟ ಜಾತಿ ಪ್ರ.ಎ. ಒಂದು ಮತ್ತು ಸಾಮಾನ್ಯ ಅಭ್ಯರ್ಥಿ ಒಂದು ಹುದ್ದೆಗೆ ಮಿಸಲಾತಿ ಕಲ್ಪಿಸಲಾಗಿದೆ. ವಯೋಮಿತಿ ಗರಿಷ್ಟ 45 ವರ್ಷ ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸುವ ಡಿಸೆಂಬರ್.1 ಕೊನೆಯ ದಿನಾಂಕವಾಗಿದ್ದು, ಡಿಸೆಂಬರ್.9 ರಂದು ನೇರ ಸಂದರ್ಶನ ಮಾಡಲಾಗುತ್ತದೆ. ಡಿಸೆಂಬರ್.16 ರಂದು ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗುವುದು.

ಅರ್ಜಿಗಳನ್ನು ಜಿಲ್ಲಾ ಅಂಧತ್ವ ನಿಯಂತ್ರಣಾಧಿಕಾರಿಗಳ ಕಚೇರಿ, 60 ಹಾಸಿಗೆ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಆವರಣದಲ್ಲಿ ಪಡೆಯಬಹುದು ಎಂದು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande