
ವಿಜಯಪುರ, 25 ನವೆಂಬರ್ (ಹಿ.ಸ.) :
ಆ್ಯಂಕರ್ : ವಿಜಯಪುರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಮತ್ತು ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ನಾಳೆ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಸಂವಿಧಾನ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿದೆ.
ನಾಳೆ ಬೆಳಿಗ್ಗೆ 9ಗಂಟೆಗೆ ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಸಂವಿಧಾನ ದಿನಾಚರಣೆ ಅಂಗವಾಗಿ ಏರ್ಪಡಿಸಿರುವ ಜಾಥಾ ಚಾಲನೆ ನೀಡಲಾಗುವುದು. ಜಾಥಾವು ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಗಾಂಧಿ ವೃತ್ತ, ಬಸವೇಶ್ವರ ವೃತ್ತ, ಅಂಬೇಡ್ಕರ ವೃತ್ತ, ಕನಕದಾಸ ವೃತ್ತದಿಂದ ಸಾಗಿ,ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದವರೆಗೆ ನಡೆಯಲಿದೆ.
ವೇದಿಕೆ ಕಾರ್ಯಕ್ರಮ ಬೆಳಿಗ್ಗೆ 10 ಗಂಟೆಗೆ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ನಡೆಯಲಿದೆ
ಈ ಕಾರ್ಯಕ್ರಮದಲ್ಲಿ ಜಿಲ್ಲಾ ಮತ್ತು ತಾಲೂಕಾ ಮಟ್ಟದ ಅಧಿಕಾರಿ,ಸಿಬ್ಬಂದಿ, ಶಾಲಾ-ಕಾಲೇಜಿನ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಮಹೇಶ ಪೋತದಾರ ಅವರು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / jyothi deshpande