ತುಂಗಭದ್ರಾ ನೀರಾವರಿ ಇಲಾಖೆ ಗುತ್ತಿಗೆ ನೌಕರರ ವೇತನ ಪಾವತಿಗೆ ಆಗ್ರಹ
ಗಂಗಾವತಿ, 25 ನವೆಂಬರ್ (ಹಿ.ಸ.) : ಆ್ಯಂಕರ್ : ಕರ್ನಾಟಕ ನೀರಾವರಿ ನಿಗಮಕ್ಕೆ ಸೇರಿದ ತುಂಗಭದ್ರಾ ನೀರಾವರಿ ಕಾರ್ಮಿಕರ ವೇತನ ಪಾವತಿಸಲು ಆಗ್ರಹಿಸಿ ತುಂಗಭದ್ರಾ ನೀರಾವರಿ ಕಾರ್ಮಿಕರ ಸಂಘದ ಕೇಂದ್ರ ಸಮಿತಿಯ ಕಾರ್ಮಿಕ ನಿರೀಕ್ಷಕರು ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ. ತುಂಗಭದ್ರ ಜಲಾಶಯದ
ತುಂಗಭದ್ರ ನೀರಾವರಿ ಇಲಾಖೆ ಗುತ್ತಿಗೆ ನೌಕರರ ವೇತನ ಪಾವತಿಗೆ ಆಗ್ರಹ


ಗಂಗಾವತಿ, 25 ನವೆಂಬರ್ (ಹಿ.ಸ.) :

ಆ್ಯಂಕರ್ : ಕರ್ನಾಟಕ ನೀರಾವರಿ ನಿಗಮಕ್ಕೆ ಸೇರಿದ ತುಂಗಭದ್ರಾ ನೀರಾವರಿ ಕಾರ್ಮಿಕರ ವೇತನ ಪಾವತಿಸಲು ಆಗ್ರಹಿಸಿ ತುಂಗಭದ್ರಾ ನೀರಾವರಿ ಕಾರ್ಮಿಕರ ಸಂಘದ ಕೇಂದ್ರ ಸಮಿತಿಯ ಕಾರ್ಮಿಕ ನಿರೀಕ್ಷಕರು ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

ತುಂಗಭದ್ರ ಜಲಾಶಯದ ಎಲ್ಲಾ ಉಪ ವಿಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾಲುವೆ ಮತ್ತು ಕಛೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರಿಗೆ 5 ತಿಂಗಳಿಂದ ಬಾಕಿ ವೇತನ ಪಾವತಿಯಾಗಿಲ್ಲ. ತಮಗೆ ವೇತನ ಪಾವತಿಸುವಲ್ಲಿ ಅನಗತ್ಯವಾಗಿ ವಿಳಂಬ ಮಾಡುತ್ತಿರುವವರ ವಿರುದ್ಧ ಹಿರಿಯ ಅಧಿಕಾರಿಗಳು ತಕ್ಷಣವೇ ಶಿಸ್ತುಕ್ರಮ ಕೈಗೊಳ್ಳಬೇಕು ಮತ್ತು ತಮಗೆ ಬರಬೇಕಾದ ಬಾಕಿ ವೇತನ ಪಾವತಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಬಾಕಿ ಇರುವ ಇಎಸ್‍ಐ, ಇಪಿಎಫ್ ಸೇರಿದಂತೆ ಇನ್ನಿತರೆ ಸೌಲಭ್ಯಗಳನ್ನು ಒದಗಿಸಬೇಕು. ತಕ್ಷಣವೇ ವೇತನ ಪಾವತಿಸಲು ಸಾಧ್ಯವಾಗದಿದ್ದಲ್ಲಿ ತಪ್ಪಿತಸ್ತರಿಂದ ದಂಡ ವಸೂಲಿ ಮಾಡಿ, ಬಡ್ಡಿ ರೂಪದಲ್ಲಿ ನಮಗೆ ಕೊಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande