
ಕೊಪ್ಪಳ, 25 ನವೆಂಬರ್ (ಹಿ.ಸ.) :
ಆ್ಯಂಕರ್ : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳಿಗೆ ಪ್ರವಾಸೋದ್ಯಮ ಇಲಾಖೆಯಿಂದ ಪ್ರವಾಸೋದ್ಯಮ ಹಾಗೂ ಆತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಈ ತರಬೇತಿಯನ್ನು ಕೆಂದ್ರ ಹಾಗೂ ರಾಜ್ಯ ಸರ್ಕಾರದ ಆತಿಥ್ಯ ಕ್ಷೇತ್ರದ ಸಂಸ್ಥೆಗಳಾದ ಎಫ್.ಸಿ.ಐ ಮೈಸೂರು ಮತ್ತು ಐ.ಹೆಚ್.ಎಮ್ ಬೆಂಗಳೂರು ಸಂಸ್ಥೆಗಳ ಮೂಲಕ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಕನಿಷ್ಠ 20 ರಿಂದ 45 ವರ್ಷದೊಳಗಿರುವ ಅಭ್ಯರ್ಥಿಗಳು ತರಬೇತಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 5 ರೊಳಗಾಗಿ ಅರ್ಜಿಯನ್ನು ಕೊಪ್ಪಳ ಜಿಲ್ಲಾಡಳಿತ ಭವನದ ಎರಡನೇ ಮಹಡಿಯಲ್ಲಿರುವ ಜಿಲ್ಲಾ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ತರಬೇತಿ ವಿವರ : ಆಹಾರ ಮತ್ತು ತಂಪು ಪಾನೀಯಗಳ ವಿತರಣೆ ತರಬೇತಿ ಪಡೆಯಲು ಬಯಸುವ ಅಭ್ಯರ್ಥಿಗಳು ಕನಿಷ್ಠ 10ನೇ ತರಗತಿಯಲ್ಲಿ ಉತ್ತಿರ್ಣರಾಗಿರಬೇಕು. ಕೊಠಡಿ ನಿರ್ವಹಣೆ ತರಬೇತಿಗೆ ಕನಿಷ್ಠ 5ನೇ ತರಗತಿಯಲ್ಲಿ ಉತ್ತಿರ್ಣರಾಗಿರಬೇಕು ಹಾಗೂ ವಿವಿಧ ಆಹಾರ ತಯಾರಕರ ತರಬೇತಿಗೆ ಕನಿಷ್ಠ 8ನೇ ತರಬೇತಿಯಲ್ಲಿ ಉತ್ತೀರ್ಣರಾಗಿರಬೇಕು. ಈ ಮೂರು ತರಬೇತಿಗಳನ್ನು 4 ತಿಂಗಳ ಅವದಿಗೆ ನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಕೊಪ್ಪಳ ಜಿಲ್ಲಾ ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿ ದೂರವಾಣಿ ಸಂಖ್ಯೆ : 08539 -225566ಗೆ ಸಂಪರ್ಕಿಸಿ ಅಥವಾ ಕೊಪ್ಪಳ ಜಿಲ್ಲಾಡಳಿತ ಭವನದ ಎರಡನೇ ಮಹಡಿಯಲ್ಲಿರುವ ಜಿಲ್ಲಾ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗೆ ಭೇಟಿ ಮಾಡುವಂತೆ ಕೊಪ್ಪಳ ಜಿಲ್ಲಾ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್