ಗುರು ತೇಜ್ ಬಹದ್ದೂರ್ ಹುತಾತ್ಮ ದಿನ ; ದೆಹಲಿಯಲ್ಲಿ ಇಂದು ಸಾರ್ವಜನಿಕ ರಜೆ
ನವದೆಹಲಿ, 25 ನವೆಂಬರ್ (ಹಿ.ಸ.) : ಆ್ಯಂಕರ್ : ಸಿಖ್ ಧರ್ಮದ ಒಂಬತ್ತನೇ ಗುರು ಗುರು ತೇಜ್ ಬಹದ್ದೂರ್ ಅವರ 350ನೇ ಹುತಾತ್ಮ ದಿನಾಚರಣೆಯ ಅಂಗವಾಗಿ ಇಂದು ದೆಹಲಿ ಸರ್ಕಾರ ಸಾರ್ವಜನಿಕ ರಜೆಯನ್ನು ಘೋಷಿಸಿದೆ. ದೆಹಲಿ ಸರ್ಕಾರದ ಎಲ್ಲಾ ಕಚೇರಿಗಳು, ಶಾಲೆಗಳು ಮತ್ತು ಕಾಲೇಜುಗಳಿಗೆ ರಜೆ ನೀಡಲಾಗಿದೆ. ದೆಹಲಿ ಮು
Teja bahadur


ನವದೆಹಲಿ, 25 ನವೆಂಬರ್ (ಹಿ.ಸ.) :

ಆ್ಯಂಕರ್ : ಸಿಖ್ ಧರ್ಮದ ಒಂಬತ್ತನೇ ಗುರು ಗುರು ತೇಜ್ ಬಹದ್ದೂರ್ ಅವರ 350ನೇ ಹುತಾತ್ಮ ದಿನಾಚರಣೆಯ ಅಂಗವಾಗಿ ಇಂದು ದೆಹಲಿ ಸರ್ಕಾರ ಸಾರ್ವಜನಿಕ ರಜೆಯನ್ನು ಘೋಷಿಸಿದೆ. ದೆಹಲಿ ಸರ್ಕಾರದ ಎಲ್ಲಾ ಕಚೇರಿಗಳು, ಶಾಲೆಗಳು ಮತ್ತು ಕಾಲೇಜುಗಳಿಗೆ ರಜೆ ನೀಡಲಾಗಿದೆ.

ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ರಜೆಯ ಘೋಷಣೆ ಮಾಡಿದ್ದು, ಗುರು ತೇಗ್ ಬಹದ್ದೂರ್ ಅವರ ಜೀವನ, ತ್ಯಾಗ ದಬ್ಬಾಳಿಕೆ ಹಾಗೂ ಅನ್ಯಾಯದ ವಿರುದ್ಧ ಶಾಶ್ವತ ಪ್ರತಿರೋಧದ ಸಂಕೇತವೆಂದು ಹೇಳಿದ್ದು. ಅವರು ಮಾನವೀಯ ಮೌಲ್ಯಗಳ ರಕ್ಷಕರಾಗಿದ್ದು, ಧರ್ಮ–ನಂಬಿಕೆಗಳ ಸ್ವಾತಂತ್ರ್ಯಕ್ಕಾಗಿ ಜೀವತ್ಯಾಗ ಮಾಡಿದ್ದನ್ನು ದೇಶ ಕೃತಜ್ಞತೆಯಿಂದ ಸ್ಮರಿಸುತ್ತದೆ ಎಂದಿದ್ದಾರೆ.

ಗುರು ತೇಜ್ ಬಹದ್ದೂರ್ ಅವರ ಹುತಾತ್ಮ ದಿನದ ಅಂಗವಾಗಿ ಪಂಜಾಬ್, ಹರಿಯಾಣ ಹಾಗೂ ಹಿಮಾಚಲ ಪ್ರದೇಶಗಳಲ್ಲಿಯೂ ಶಾಲೆಗಳಿಗೆ ರಜೆ ಘೋಷಿಸಲಾಗಿದೆ

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande