ಸಂಡೂರು: ಕ್ರೀಡಾಂಗಣಕ್ಕೆ ಕೆಎಂಇಆರ್ ಸಿ ವ್ಯವಸ್ಥಾಪಕ ನಿರ್ದೇಶಕ ಡಾ.ಸಂಜಯ್ ಎಸ್ ಬಿಜ್ಜೂರ್ ಭೇಟಿ
ಸಂಡೂರು, 25 ನವೆಂಬರ್ (ಹಿ.ಸ.) : ಆ್ಯಂಕರ್ : ಸಂಡೂರು ಪಟ್ಟಣದ ತಾಲ್ಲೂಕು ಕ್ರೀಡಾಂಗಣಕ್ಕೆ ಕೆಎಂಇಆರ್ ಸಿ ವ್ಯವಸ್ಥಾಪಕ ನಿರ್ದೇಶಕ ಡಾ.ಸಂಜಯ್ ಎಸ್ ಬಿಜ್ಜೂರ್ ಅವರು ಮಂಗಳವಾರ ಭೇಟಿ-ಪರಿಶೀಲನೆ ನಡೆಸಿದ್ದಾರೆ. ಕ್ರೀಡಾಂಗಣಕ್ಕೆ ಸೂಕ್ತ ತಡೆಗೋಡೆಯಿಲ್ಲ, ಕುಳಿತುಕೊಳ್ಳುವ ಆಸನಗಳ ಹಿಂಭಾಗದಲ್ಲಿ
ಸಂಡೂರು: ಕ್ರೀಡಾಂಗಣಕ್ಕೆ ಕೆಎಂಇಆರ್ ಸಿ ವ್ಯವಸ್ಥಾಪಕ ನಿರ್ದೇಶಕ ಡಾ.ಸಂಜಯ್ ಎಸ್ ಬಿಜ್ಜೂರ್ ಭೇಟಿ

ಸಂಡೂರು: ಕ್ರೀಡಾಂಗಣಕ್ಕೆ ಕೆಎಂಇಆರ್ ಸಿ ವ್ಯವಸ್ಥಾಪಕ ನಿರ್ದೇಶಕ ಡಾ.ಸಂಜಯ್ ಎಸ್ ಬಿಜ್ಜೂರ್ ಭೇಟಿ

ಸಂಡೂರು: ಕ್ರೀಡಾಂಗಣಕ್ಕೆ ಕೆಎಂಇಆರ್ ಸಿ ವ್ಯವಸ್ಥಾಪಕ ನಿರ್ದೇಶಕ ಡಾ.ಸಂಜಯ್ ಎಸ್ ಬಿಜ್ಜೂರ್ ಭೇಟಿ

ಸಂಡೂರು: ಕ್ರೀಡಾಂಗಣಕ್ಕೆ ಕೆಎಂಇಆರ್ ಸಿ ವ್ಯವಸ್ಥಾಪಕ ನಿರ್ದೇಶಕ ಡಾ.ಸಂಜಯ್ ಎಸ್ ಬಿಜ್ಜೂರ್ ಭೇಟಿ

ಸಂಡೂರು, 25 ನವೆಂಬರ್ (ಹಿ.ಸ.) :

ಆ್ಯಂಕರ್ : ಸಂಡೂರು ಪಟ್ಟಣದ ತಾಲ್ಲೂಕು ಕ್ರೀಡಾಂಗಣಕ್ಕೆ ಕೆಎಂಇಆರ್ ಸಿ ವ್ಯವಸ್ಥಾಪಕ ನಿರ್ದೇಶಕ ಡಾ.ಸಂಜಯ್ ಎಸ್ ಬಿಜ್ಜೂರ್ ಅವರು ಮಂಗಳವಾರ ಭೇಟಿ-ಪರಿಶೀಲನೆ ನಡೆಸಿದ್ದಾರೆ.

ಕ್ರೀಡಾಂಗಣಕ್ಕೆ ಸೂಕ್ತ ತಡೆಗೋಡೆಯಿಲ್ಲ, ಕುಳಿತುಕೊಳ್ಳುವ ಆಸನಗಳ ಹಿಂಭಾಗದಲ್ಲಿ ಗ್ಯಾಲರಿ ಅಳವಡಿಸಬೇಕು. ಶೌಚಾಲಯ, ವಿಶ್ರಾಂತಿ ಕೊಠಡಿ, ಕಚೇರಿ ಕಟ್ಟಡ ಕೊರತೆ ಇದೆ. ಅನುದಾನ ಬೇಕಾದಲ್ಲಿ ಪ್ರಸ್ತಾವ ಸಲ್ಲಿಸಬೇಕು. ಒಳಾಂಗಣ ಮತ್ತು ಹೊರಾಂಗಣ ಕ್ರೀಡೆಗಳಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಿ, ಕ್ರೀಡಾಂಗಣವನ್ನು ಅಭಿವೃದ್ಧಿ ಪಡಿಸಬೇಕು. ಇದರಿಂದ ಆದಾಯ ಬರಲಿದೆ ಎಂದು ತಿಳಿಸಿದರು.

ಕ್ರೀಡಾ ಇಲಾಖೆಯಲ್ಲಿ ಕ್ರೀಡಾಂಗಣ, ಹಾಸ್ಟೆಲ್ ನಿರ್ವಹಣೆಗೆ ಸಿಬ್ಬಂದಿಗೆ ಕೊರತೆ ಇದೆ ಎಂದು ಜಿಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಅವರು ನಿರ್ದೇಶಕರ ಗಮನಕ್ಕೆ ತಂದರು. ಇದಕ್ಕೆ ಪ್ರತಿಕ್ರಿಯಿಸಿದ ಡಾ.ಸಂಜಯ್ ಎಸ್ ಬಿಜ್ಜೂರ್ ಅವರು ಬಾಹ್ಯ ಆಧಾರದ ಮೇಲೆ ಸಿಬ್ಬಂದಿ ನೇಮಕಕ್ಕೆ ಪ್ರಸ್ತಾವ ಸಲ್ಲಿಸಿದರೆ ಅನುದಾನ ಒದಗಿಸಲಾಗುವುದು ಎಂದರು.

ಪಟ್ಟಣದಲ್ಲಿ ಸೂಕ್ತ ಸ್ಥಳ ಗುರುತಿಸಿ ಆಟೋ ಕ್ಲಸ್ಟರ್ ನಿರ್ಮಿಸಿ, ಸರ್ಕಾರಿ ಜಾಗ ಲಭ್ಯವಿಲ್ಲದಿದ್ದಲ್ಲಿ ಖರೀದಿಸಬೇಕು. ಇದರಿಂದ ಸ್ಥಳೀಯರಿಗೆ ಬೃಹತ್ ವಾಹನ ರಿಪೇರಿ ಕೌಶಲ್ಯಕ್ಕೆ ಪೂರಕವಾಗಲಿದೆ. ಹೆಚ್ಚಾಗಿ ಪ್ಲಾಸ್ಟಿಕ್ ಬಳಕೆ ನಿಷೇಧ ಕುರಿತು ಹೆಚ್ಚಿನ ಅರಿವು ಮೂಡಿಸಬೇಕು ಎಂದು ಸಂಡೂರು ಪುರಸಭೆ ಮುಖ್ಯಾಧಿಕಾರಿಗಳಿಗೆ ಸೂಚಿಸಿದರು.

ಈ ವೇಳೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪನಿರ್ದೇಶಕರಾದ ದ್ವಿತೀಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಕೆ.ಗ್ರೇಸಿ, ಸಂಡೂರು ಪುರಸಭೆ ಮುಖ್ಯಾಧಿಕಾರಿ ವಿನಯ್ ಸೇರಿದಂತೆ ಇತರರು ಹಾಜರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್

 rajesh pande