ಪಂಚ ಗ್ಯಾರಂಟಿ ಯೋಜನೆಗಳ ಪ್ರಚಾರದ ಕಲಾ ಜಾಥಾಕ್ಕೆ ಚಾಲನೆ
ಪಾಂಡುರಂಗ
ಪಂಚ ಗ್ಯಾರಂಟಿ ಯೋಜನೆಗಳ ಪ್ರಚಾರದ ಕಲಾ ಜಾಥಾಕ್ಕೆ ಚಾಲನೆ


ಪಂಚ ಗ್ಯಾರಂಟಿ ಯೋಜನೆಗಳ ಪ್ರಚಾರದ ಕಲಾ ಜಾಥಾಕ್ಕೆ ಚಾಲನೆ


ಪಂಚ ಗ್ಯಾರಂಟಿ ಯೋಜನೆಗಳ ಪ್ರಚಾರದ ಕಲಾ ಜಾಥಾಕ್ಕೆ ಚಾಲನೆ


ಪಂಚ ಗ್ಯಾರಂಟಿ ಯೋಜನೆಗಳ ಪ್ರಚಾರದ ಕಲಾ ಜಾಥಾಕ್ಕೆ ಚಾಲನೆ


ಪಂಚ ಗ್ಯಾರಂಟಿ ಯೋಜನೆಗಳ ಪ್ರಚಾರದ ಕಲಾ ಜಾಥಾಕ್ಕೆ ಚಾಲನೆ


ಕೊಪ್ಪಳ, 25 ನವೆಂಬರ್ (ಹಿ.ಸ.) :

ಆ್ಯಂಕರ್ : ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಾದ ಶಕ್ತಿ, ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷ್ಮಿ ಹಾಗೂ ಯುವನಿಧಿ ಯೋಜನೆ ಕುರಿತಂತೆ ಎಲ್‌ಇಡಿ ವಾಹನದ ಮೂಲಕ ಕಿರುಚಿತ್ರಗಳ ಪ್ರದರ್ಶನ, ಸಂಗೀತ, ಬೀದಿ ನಾಟಕದಿಂದ ಜನಸಾಮಾನ್ಯರಿಗೆ ಮಾಹಿತಿ ಹಾಗೂ ಪ್ರಚಾರ ನೀಡಲು ಕೊಪ್ಪಳ ಜಿಲ್ಲೆಯಲ್ಲಿ ಹಮ್ಮಿಕೊಂಡಿರುವ ಕಲಾ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಕೊಪ್ಪಳ ಜಿಲ್ಲಾಡಳಿತ ಭವನದ ಆವರಣದಲ್ಲಿ ಕೊಪ್ಪಳ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾರದ ರೆಡ್ಡಿ ಶ್ರೀನಿವಾಸ ಹಾಗೂ ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಅವರು ಹಸಿರು ನಿಶಾನೆ ತೋರುವ ಮೂಲಕ ಕಲಾ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಕೊಪ್ಪಳ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ರೆಡ್ಡಿ ಶ್ರೀನಿವಾಸ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳಾದ ಶಕ್ತಿ, ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷ್ಮಿ ಹಾಗೂ ಯುವನಿಧಿ ಯೋಜನೆಗಳಿಂದ ರಾಜ್ಯದ ಜನತೆಗೆ ಸಾಕಷ್ಟು ಅನುಕೂಲವಾಗಿದೆ. ಪಂಚ ಗ್ಯಾರಂಟಿ ಯೋಜನೆಗಳ ಕುರಿತು ಕಲಾ ಜಾಥಾ ಕಾರ್ಯಕ್ರಮದ ಮೂಲಕ ಜಿಲ್ಲೆಯ ಗ್ರಾಮಗಳಲ್ಲಿ ಪ್ರಚಾರ ಮಾಡಲಾಗುತ್ತಿದ್ದು, ಹೆಚ್ಚಿನ ಜನರಿರುವ ಪ್ರದೇಶಗಳಲ್ಲಿ ಈ ಕಾರ್ಯಕ್ರಮ ಮಾಡಿ, ಯೋಜನೆಗಳಿಂದ ಜನರಿಗೆ ಸಿಗುತ್ತಿರುವ ಲಾಭಗಳ ಕುರಿತು ಜನರಿಗೆ ಅರ್ಥವಾಗುವ ರೀತಿಯಲ್ಲಿ ಕಲಾವಿದರು ಮಾಹಿತಿ ನೀಡಲಿದ್ದಾರೆ. ಐದು ಗ್ಯಾರಂಟಿ ಯೋಜನೆಗಳ ಪ್ರಚಾರ ಕಾರ್ಯಕ್ರಮವು ಜಿಲ್ಲೆಯಲ್ಲಿ ಅಚ್ಚುಕಟ್ಟಾಗಿ ಹಮ್ಮಿಕೊಳ್ಳಬೇಕೆಂದು ಹೇಳಿದರು.

ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಅವರು ಮಾತನಾಡಿ, ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಬಗ್ಗೆ ವಾರ್ತಾ ಇಲಾಖೆಯ ಪ್ರಚಾರ ವಾಹನದ ಮೂಲಕ ಪ್ರಚಾರ ಮಾಡಲಾಗುತ್ತಿದೆ. ಜಿಲ್ಲೆಯ ಪ್ರತಿ ತಾಲ್ಲೂಕುಗಳಲ್ಲಿ ಸರ್ಕಾರದ ಯೋಜನೆಗಳ ಬಗ್ಗೆ ಮತ್ತು ಸಾಧನೆಗಳ ಬಗ್ಗೆ ತಿಳಿಸಲಾಗುತ್ತಿದೆ. ಇದಲ್ಲದೇ ಈ ಯೋಜನೆಗಳಿಂದ ಬಾಕಿ ಉಳಿದ ಫಲಾನುಭವಿಗಳು ಯಾವ ರೀತಿ ಸದುಪಯೋಗ ಪಡೆದುಕೊಳ್ಳಬೇಕು ಎಂಬುವುದರ ಬಗ್ಗೆಯೂ ಕಲಾ ತಂಡದಿಂದದಿAದ ಅರಿವು ಮೂಡಿಸಲಾಗುತ್ತಿದೆ. ಜಿಲ್ಲೆಯ ಸಾರ್ವಜನಿಕರು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಈ ಸಂದರ್ಭದಲ್ಲಿ ಕೊಪ್ಪಳ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸದಸ್ಯರಾದ ಡಾ. ವೆಂಕಟೇಶ್, ಕೊಪ್ಪಳ ತಾಲ್ಲೂಕು ಸಮಿತಿ ಸದಸ್ಯರಾದ ಮಾನ್ವಿ ಪಾಶಾ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ. ಸುರೇಶ್ ಜಿ, ವಾರ್ತಾ ಇಲಾಖೆಯ ಪ್ರ.ದ.ಸ ಭರತಕುಮಾರ, ಸಿಬ್ಬಂದಿಗಳಾದ ಎಂ.ಪಾಂಡುರಂಗ, ಎನ್.ತಿಪ್ಪಯ್ಯ ನಾಯ್ಡು, ಆರೀಫ್ ಅಹ್ಮದ್ ಸೇರಿದಂತೆ ಇತರೆ ಸಿಬ್ಬಂದಿ, ಚಿಕ್ಕಮ್ಯಾಗೇರಿಯ ರಂಗಚೇತನ ಸಾಂಸ್ಕೃತಿ ಕಲಾ ಸಂಸ್ಥೆಯ ಕಲಾವಿದರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande