ನಾಯಕತ್ವ ಗೊಂದಲಕ್ಕೆ ಹೈಕಮಾಂಡ್ ಮುಕ್ತಾಯ ಹಾಡಲಿ : ಸಿದ್ದರಾಮಯ್ಯ
ಬೆಂಗಳೂರು, 25 ನವೆಂಬರ್ (ಹಿ.ಸ.) : ಆ್ಯಂಕರ್ : ರಾಜ್ಯದಲ್ಲಿ ನಡೆದಿರುವ ನಾಯಕತ್ವ ಬದಲಾವಣೆ ಎಲ್ಲಾ ಗೊಂದಲಗಳಿಗೆ ಮುಕ್ತಾಯ ಹಾಡಲು ಹೈಕಮಾಂಡ್ ತೀರ್ಮಾನಿಸಬೇಕು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನಲ್ಲಿ ಕಾವೇರಿ ನಿವಾಸದಲ್ಲಿ ಮಾಧ್ಯಮಗಳಿಗೆ ಮಾತನಾಡಿದ ಅವರು, ಶಾಸಕರ ಮತ್ತೊಂದು ತಂಡ
Cm


ಬೆಂಗಳೂರು, 25 ನವೆಂಬರ್ (ಹಿ.ಸ.) :

ಆ್ಯಂಕರ್ : ರಾಜ್ಯದಲ್ಲಿ ನಡೆದಿರುವ ನಾಯಕತ್ವ ಬದಲಾವಣೆ ಎಲ್ಲಾ ಗೊಂದಲಗಳಿಗೆ ಮುಕ್ತಾಯ ಹಾಡಲು ಹೈಕಮಾಂಡ್ ತೀರ್ಮಾನಿಸಬೇಕು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಕಾವೇರಿ ನಿವಾಸದಲ್ಲಿ ಮಾಧ್ಯಮಗಳಿಗೆ ಮಾತನಾಡಿದ ಅವರು, ಶಾಸಕರ ಮತ್ತೊಂದು ತಂಡ ದೆಹಲಿಗೆ ಭೇಟಿ ನೀಡಿರುವ ಬಗ್ಗೆ ಪ್ರತಿಕ್ರಿಯಿಸಿದ್ದು, ಶಾಸಕರಿಗೆ ಅವರ ಅಭಿಪ್ರಾಯ ತಿಳಿಸುವ ಸ್ವಾತಂತ್ರ್ಯ ಇದೆ. ಪಕ್ಷದ ವರಿಷ್ಠರು ಏನು ಹೇಳುತ್ತಾರೆ ಎಂದು ನೋಡೋಣ ಎಂದರು. ಅಂತಿಮವಾಗಿ ಈ ಎಲ್ಲಾ ಗೊಂದಲಗಳಿಗೆ ಮುಕ್ತಾಯ ಹಾಡಲು ಹೈಕಮಾಂಡ್ ತೀರ್ಮಾನಿಸಬೇಕು ಎಂದರು.

ಸಚಿವ ಸಂಪುಟ ವಿಸ್ತರಣೆಯನ್ನು ಪಕ್ಷದ ವರಿಷ್ಠರು ಸೂಚನೆ ನೀಡಿದಾಗ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದು, ರಾಹುಲ್ ಗಾಂಧಿಯವರನ್ನು ಭೇಟಿ ಮಾಡುವುದು ಸದ್ಯಕ್ಕಿಲ್ಲ ಎಂದು ಹೇಳಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande