ಪಶು ಸಂಗೋಪನೆ ಇಲಾಖೆಯ ಭ್ರಷ್ಟ ಅಧಿಕಾರಿ ಮೇಲೆ ಲೋಕಾಯುಕ್ತ ದಾಳಿ
ಗದಗ, 25 ನವೆಂಬರ್ (ಹಿ.ಸ.) : ಆ್ಯಂಕರ್ : ಪಶುಸಂಗೋಪನೆ ಇಲಾಖೆಯ ಪಶುವೈದ್ಯಕೀಯ ಹಿರಿಯ ಪರೀಕ್ಷಕ ಸತೀಶ್ ಕಟ್ಟಿಮನಿ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ಇಂದು ಬೆಳಿಗ್ಗೆ ಹಲವು ಕಡೆ ಆದಾಯ ಮೀರಿ ಆಸ್ತಿ ಹೊಂದಿರುವ ಪ್ರಕರಣದಲ್ಲಿ ಭರ್ಜರಿ ದಾಳಿ ನಡೆಸಿದ್ದಾರೆ. ಬೆಟಗೇರಿ ಟೌನ್‌ಶಿಪ್ ಪ್ರದೇಶದ
ಫೋಟೋ


ಗದಗ, 25 ನವೆಂಬರ್ (ಹಿ.ಸ.) :

ಆ್ಯಂಕರ್ : ಪಶುಸಂಗೋಪನೆ ಇಲಾಖೆಯ ಪಶುವೈದ್ಯಕೀಯ ಹಿರಿಯ ಪರೀಕ್ಷಕ ಸತೀಶ್ ಕಟ್ಟಿಮನಿ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ಇಂದು ಬೆಳಿಗ್ಗೆ ಹಲವು ಕಡೆ ಆದಾಯ ಮೀರಿ ಆಸ್ತಿ ಹೊಂದಿರುವ ಪ್ರಕರಣದಲ್ಲಿ ಭರ್ಜರಿ ದಾಳಿ ನಡೆಸಿದ್ದಾರೆ.

ಬೆಟಗೇರಿ ಟೌನ್‌ಶಿಪ್ ಪ್ರದೇಶದಲ್ಲಿರುವ ಮನೆಯ ಮೇಲೆ ಮೊದಲಿಗೆ ಅಧಿಕಾರಿಗಳು ತಲಾಶಿ ನಡೆಸಿದ್ದು, ನಂತರ ಕ್ರಮವಾಗಿ ಗದಗ ಹಾಗೂ ಬೆಂಗಳೂರಿನ ಮನೆಗಳ ಮೇಲೆ ದಾಳಿ ಮುಂದುವರಿಸಿದರು. ಸತೀಶ್ ಕಟ್ಟಿಮನಿ ಅವರಿಗೆ ಸೇರಿದ ಐದು ಜಾಗಗಳಲ್ಲಿ ಪರಿಶೀಲನೆ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಗದಗ ತಾಲೂಕಿನ ಹುಯಿಲಗೋಳ ಗ್ರಾಮದ ಪಶು ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿರುವ ಸತೀಶ್ ಕಟ್ಟಿಮನಿ ಅವರ ಮಗಳು ಬೆಂಗಳೂರಿನಲ್ಲಿ ವಾಸವಾಗಿರುವುದು ತಿಳಿದು, ಅಲ್ಲಿನ ಮನೆಯನ್ನು ಸಹ ಅಧಿಕಾರಿಗಳು ಪರಿಶೀಲಿಸಿದರೆಂಬ ಮಾಹಿತಿ ಲಭ್ಯವಾಗಿದೆ.

ಈ ದಾಳಿಗೆ ಲೋಕಾಯುಕ್ತ ಡಿವೈಎಸ್‌ಪಿ ವಿಜಯ ಬಿರಾದಾರ್ ನೇತೃತ್ವ ವಹಿಸಿದ್ದು, ಬೆಳಗಾವಿ, ಬಾಗಲಕೋಟೆ, ವಿಜಯಪುರ ಜಿಲ್ಲೆಗಳ ಲೋಕಾಯುಕ್ತ ತಂಡಗಳು ಕೂಡಿ ಸಂಯುಕ್ತ ತಪಾಸಣೆ ನಡೆಸಿದವು.

ದಾಳಿಯಲ್ಲಿ ಅಧಿಕಾರಿಗಳು ಮನೆ, ದಾಖಲೆ, ಜಾಗ ಸಂಬಂಧಿತ ಪತ್ರಗಳು, ಬ್ಯಾಂಕ್ ವಿವರಗಳು ಸೇರಿದಂತೆ ಹಲವಾರು ದಾಖಲೆಗಳನ್ನು ವಶಪಡಿಸಿಕೊಂಡಿರುವ ಮಾಹಿತಿ ದೊರಕಿದೆ.

ಆದಾಯಕ್ಕೆ ಸೇರದ ಆಸ್ತಿಗಳ ಬಗ್ಗೆ ಮತ್ತಷ್ಟು ವಿವರಗಳು ಹೊರಬೀಳುವ ನಿರೀಕ್ಷೆ ವ್ಯಕ್ತವಾಗಿದ್ದು, ಗದಗ ಜಿಲ್ಲೆಯಲ್ಲಿ ಈ ದಾಳಿ ಸ್ಥಳೀಯವಾಗಿ ದೊಡ್ಡ ಚರ್ಚೆಗೆ ಕಾರಣವಾಗಿದೆ.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande