
ಬೆಂಗಳೂರು, 25 ನವೆಂಬರ್ (ಹಿ.ಸ.) :
ಆ್ಯಂಕರ್ : ರಾಜ್ಯದ ನಾನಾ ಇಲಾಖೆಗಳಲ್ಲಿನ ಭ್ರಷ್ಟಾಚಾರ ದೂರಿನ ಹಿನ್ನೆಲೆ ಲೋಕಾಯುಕ್ತ ಪೊಲೀಸರು ಇಂದು ಬೆಳಿಗ್ಗೆ ಏಕಕಾಲದಲ್ಲಿ ದಾಳಿ ನಡೆಸಿದ್ದು, ಒಟ್ಟು 10 ಅಧಿಕಾರಿಗಳ ಮನೆ ಮತ್ತು ಕಚೇರಿಗಳಲ್ಲಿ ಪರಿಶೀಲನೆ ಆರಂಭಿಸಿದ್ದಾರೆ.
ವಿಶೇಷ ತಂಡಗಳನ್ನು ರಚಿಸಿ ನಡೆಸಲಾದ ಈ ಕಾರ್ಯಾಚರಣೆಯಲ್ಲಿ ಅಕ್ರಮ ಆಸ್ತಿ, ದಾಖಲೆಗಳ ಅಸಮರ್ಪಕತೆ, ಹಣಕಾಸು ವ್ಯವಹಾರಗಳ ವೈರುಧ್ಯಗಳ ಕುರಿತು ತನಿಖೆ ನಡೆಯುತ್ತಿದೆ. ದಾಳಿಯ ವೇಳೆಯಲ್ಲಿ ಕೆಲವು ಮುಖ್ಯ ದಾಖಲೆಗಳನ್ನು ವಶಪಡಿಸಿಕೊಂಡಿರುವ ಮಾಹಿತಿ ಆರಂಭಿಕ ಹಂತದಲ್ಲಿ ಲಭ್ಯವಾಗಿದೆ.
ದಾಳಿಗೆ ಗುರಿಯಾದ ಅಧಿಕಾರಿಗಳ ವಿವರ:
ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಸಾರಿಗೆ ಕಚೇರಿಯ ಸೂಪರಿಂಟೆಂಡೆಂಟ್ ಕುಮಾರಸ್ವಾಮಿ,
ಮಂಡ್ಯ ನಗರ ಪಾಲಿಕೆ ಸಿಎಓ ಪುಟ್ಟಸ್ವಾಮಿ
ಬೀದರ್ ಕೃಷ್ಣಾ ಮೇಲ್ದಂಡೆ ಯೋಜನೆ ಮುಖ್ಯ ಇಂಜಿನಿಯರ್ ಪ್ರೇಮ್ ಸಿಂಗ್
ಮೈಸೂರು ಹೂಟಗಳ್ಳಿ ನಗರ ಪಾಲಿಕೆ ಕಂದಾಯ ಇನ್ಸ್‌ಪೆಕ್ಟರ್ ರಾಮಸ್ವಾಮಿ ಸಿ.,
ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಸುಭಾಷ್ ಚಂದ್ರ,
ಹುಲಿಗೋಲ್ ಪ್ರಾಥಮಿಕ ಪಶು ಚಿಕಿತ್ಸಾ ಕೇಂದ್ರದ ಹಿರಿಯ ಪರಿಶೀಲಕ ಸತೀಶ್,
ಶಿವಮೊಗ್ಗ ಎಸ್ಐಎಂಎಸ್ ಮೆಡಿಕಲ್ ಕಾಲೇಜಿನ ಎಫ್‌ಡಿಎ ಲಕ್ಷ್ಮೀಪತಿ ಸಿ.ಎನ್,
ದಾವಣಗೆರೆ ಎಪಿಎಂಸಿ ಸಹಾಯಕ ನಿರ್ದೇಶಕ ಪ್ರಭು ಜೆ.
ಮೈಸೂರು ಪಿಡಬ್ಲುಡಿ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಗಿರೀಶ್ ಡಿ.ಎಂ.
ಹಾವೇರಿ ಯೋಜನಾ ನಿರ್ದೇಶಕ ಕಚೇರಿಯ ಕಾರ್ಯಪಾಲಕ ಇಂಜಿನಿಯರ್ ಶೇಕಪ್ಪ ದಾಳಿಗೊಳಗಾದ ಅಧಿಕಾರಿಗಳಾಗಿದ್ದಾರೆ.
ಲೋಕಾಯುಕ್ತದ ದಾಳಿ ಮುಂದುವರಿದಿದ್ದು, ಅಧಿಕಾರಿಗಳ ಬ್ಯಾಂಕ್ ಖಾತೆಗಳು, ಆಸ್ತಿ ದಾಖಲೆಗಳು ಮತ್ತು ಲೆಕ್ಕಪತ್ರಗಳನ್ನು ವಿಚಾರಿಸಿ ಪರಿಶೀಲನೆ ನಡೆಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa