
ವಿಜಯಪುರ, 25 ನವೆಂಬರ್ (ಹಿ.ಸ.) :
ಆ್ಯಂಕರ್ : ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಅವರು ತಮ್ಮ ಕ್ಷೇತ್ರದ ಫಲಾನುಭವಿಗೆ ಸರ್ಕಾರದ ಯೋಜನೆಯ ಕಾರು ವಿತರಿಸಿದರು.
ಮಂಗಳವಾರ ವಿಜಯಪುರದ ಗೃಹ ಕಚೇರಿಯಲ್ಲಿ ತಮ್ಮ ತವರು ಕ್ಷೇತ್ರ ಬಸವನಬಾಗೇವಾಡಿಯ ಪ್ರವೀಣ ಪೂಜಾರಿ ಇವರಿಗೆ ಸರ್ಕಾರದ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ 2023-24 ನೇ ಸಾಲಿನ ಸಹಾಯಧನ ಯೋಜನೆ ಅಡಿಯಲ್ಲಿ ನೀಡಲಾಗಿರುವ ಕಾರಿನ ಕೀಲಿಯನ್ನು ಸಚಿವರು ಫಲಾನುಭವಿಗೆ ಹಸ್ತಾಂತರಿಸಿದರು.
ಹಿಂದೂಸ್ತಾನ್ ಸಮಾಚಾರ್ / jyothi deshpande