
ಕೊಪ್ಪಳ, 25 ನವೆಂಬರ್ (ಹಿ.ಸ.) :
ಆ್ಯಂಕರ್ : 2025-26ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ ಬೆಲೆ ಯೋಜನೆಯಲ್ಲಿ ರೈತರಿಂದ ಭತ್ತ ಖರೀದಿ ಮಾಡುವ ಕುರಿತು ನೋಂದಣಿ ಅವಧಿಯನ್ನು ವಿಸ್ತರಿಸಲಾಗಿದೆ.
ಕೊಪ್ಪಳ ಜಿಲ್ಲೆಯಲ್ಲಿ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ಖರೀದಿ ಏಜೆನ್ಸಿಯಾಗಿ ನೇಮಕವಾಗಿದ್ದು, ಭತ್ತ ಖರೀದಿ ಪ್ರಕ್ರಿಯೇಯನ್ನು ಪ್ರಾರಂಭಿಸಲಾಗಿದೆ. 2025 ಅಕ್ಟೋಬರ್ 31ರ ವರೆಗೆ ರೈತರ ನೋಂದಣಿ ಕಾರ್ಯ ಕೈಗೊಳ್ಳುವಂತೆ ಸೂಚಿಸಲಾಗಿದ್ದು, ಸರ್ಕಾರವು ಈ ನೋಂದಣಿ ಕಾರ್ಯವನ್ನು 2025 ಡಿಸೆಂಬರ್ 31ರ ವಿಸ್ತರಿಸಿ ಆದೇಶಿಸಿರುತ್ತದೆ.
2025-26ನೇ ಸಾಲಿನಲ್ಲಿ ಭತ್ತದ ಬೆಂಬಲ ಬೆಲೆಯು ಸಾಮಾನ್ಯ ಭತ್ತಕ್ಕೆ 2369 ರೂ., ಗ್ರೇಡ್-ಎ ಭತ್ತಕ್ಕೆ 2389 ರೂ.ಗಳ ದರ ನಿಗದಿಪಡಿಸಲಾಗಿದೆ. ಪ್ರತಿ ರೈತರಿಂದ ಪ್ರತಿ ಎಕರೆಗೆ 25 ಕ್ವಿಂಟಲ್ ನಂತೆ ಗರಿಷ್ಟ 50 ಕ್ವಿಂಟಲ್ ಭತ್ತವನ್ನು ಖರೀದಿಸಲಾಗುವುದು. ಜಿಲ್ಲೆಯ ರೈತರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಕೊಪ್ಪಳ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಉಪನಿರ್ದೇಶಕ ಸೋಮಶೇಖರ ಬಿರಾದಾರ ಅವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್