

ರಾಯಚೂರು, 25 ನವೆಂಬರ್ (ಹಿ.ಸ.) :
ಆ್ಯಂಕರ್ : 2025-26ನೇ ಸಾಲಿನ ಬೆಂಬಲ ಯೋಜನೆಯಡಿ ಹತ್ತಿ ಖರೀದಿ ನಡೆಸುತ್ತಿರುವ ರಾಯಚೂರು ನಗರದ ರಾಯಚೂರು ಒಕ್ಕುಲುತನ ಹುಟ್ಟುವಳಿ ಮಾರಾಟ ಹಾಗೂ ಸಂಸ್ಕರಣ ಸಹಕಾರ ಸಂಘಕ್ಕೆ ಸಂಸದರಾದ ಜಿ.ಕುಮಾರ ನಾಯಕ ಅವರು ಭೇಟಿ ನೀಡಿ ಖರೀದಿ ಪ್ರಕ್ರಿಯೆಯ ವೀಕ್ಷಣೆ ನಡೆಸಿದರು.
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಜಯವಂತರಾವ್ ಪತಂಗೆ, ಉಪಾಧ್ಯಕ್ಷರಾದ ಶಶಿಧರ ಪಾಟೀಲ, ನಿರ್ದೇಶಕರಾದ ಮಲ್ಲನಗೌಡ ಪಾಟೀಲ, ಶರಬಣ್ಣ ಪಾಟೀಲ, ಶಂಕರರೆಡ್ಡಿ, ಭಾರತೀಯ ಹತ್ತಿ ನಿಗಮದ ಖರೀದಿ ಕೇಂದ್ರದ ಅಧಿಕಾರಿಗಳು ಉಪಸ್ಥಿತರಿದ್ದರು. ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಸಂಸದರಿಗೆ ಸನ್ಮಾನಿಸಿದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್