
ಬಳ್ಳಾರಿ, 25 ನವೆಂಬರ್ (ಹಿ.ಸ.) :
ಆ್ಯಂಕರ್ : ಮಹಿಳೆಯರು ಮತ್ತು ಮಕ್ಕಳ ಮೇಲಿನ ಅಪರಾಧಗಳ ವಿರುದ್ಧ ಹೋರಾಟಕ್ಕೆ ಸಜ್ಜಾಗಿ ಎಂದು ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆಯ ರಾಜ್ಯ ಕಾರ್ಯದರ್ಶಿ ಶೋಭಾ ಎಸ್. ಅವರು ಕರೆ ನೀಡಿದ್ದಾರೆ.
ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆಯ ಬಳ್ಳಾರಿ ಜಿಲ್ಲಾ ಸಮಿತಿಯು ನಗರದ ಗಡಿಗೆ ಚೆನ್ನಪ್ಪ ವೃತ್ತದಲ್ಲಿ ಮಂಗಳವಾರ ಏರ್ಪಡಿಸಿದ್ದ ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮಹಿಳೆಯರು ಮತ್ತು ಮಕ್ಕಳ ಮೇಲಿನ ಅಪರಾಧಗಳು ದಿನೇ ದಿನೇ ಹೆಚ್ಚುತ್ತಿವೆ. ನಿರ್ಭಯ, ಆಸಿಫಾ, ಪ್ರಿಯಾಂಕ ರೆಡ್ಡಿ, ಅಭಯ ಪ್ರಕರಣಗಳ ಫಲಿತಾಂಶ ಗೊತ್ತಿದ್ದರೂ ಅನೇಕರು ಮಹಿಳೆಯರು ಮತ್ತು ಮಕ್ಕಳ ಮೇಲೆ ಅತ್ಯಾಚಾರ - ಹಲ್ಲೆಗಳನ್ನು ನಡೆಸುತ್ತಿರುವುದು ಆತಂಕಕರಾಗಿ ಎಂದು ಟೀಕಿಸಿದರು.
ಕರ್ನಾಟಕದಲ್ಲಿ ಸೌಜನ್ಯ, ದಾನಮ್ಮ, ನೇಹಾ ಹಿರೇಮಠ್, ಅಂಜಲಿ, ಮಹಾಲಕ್ಷ್ಮಿ, ಯಾಮಿನಿ ಅವರ ಘೋರವಾದ ಕೊಲೆಗಳು ಜನಸಾಮಾನ್ಯರ ಸಹಜವಾದ ಜೀವನಕ್ಕೆ ಧಕ್ಕೆ ತರುತ್ತಿವೆ. ಹುಬ್ಬಳ್ಳಿ, ತೋರಣಗಲ್ಲು ಮತ್ತು ಮೈಸೂರಿನಲ್ಲಿ ಕಂದಮ್ಮಗಳ ಮೇಲಿನ ದೌರ್ಜನ್ಯಗಳು ಎಲ್ಲರ ಮನಸ್ಸನ್ನು ಕಲಕಿವೆ ಎಂದು ಅವರು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದ ಅಖಿಲ ಭಾರತ ಮಹಿಳಾ ಸಾಂಸ್ಕøತಿಕ ಸಂಘಟನೆಯ ಜಿಲ್ಲಾ ಅಧ್ಯಕ್ಷರಾದ ಶ್ರೀಮತಿ ಈಶ್ವರಿ ಅವರು, ಮಹಿಳೆಯರು ಮತ್ತು ಮಕ್ಕಳ ಮೇಲಿನ ಅಪರಾಧಗಳನ್ನು ತಡೆಗಟ್ಟುವಲ್ಲಿ ಪೆÇಲೀಸ್, ಆಡಳಿತಾಂಗ ಮತ್ತು ನ್ಯಾಯಾಂಗ ಸಂಪೂರ್ಣವಾಗಿ ಸೋತಿವೆ - ನಿಷ್ಕ್ರಿಯಗೊಂಡಿವೆ ಎಂದರು.
ಅಖಿಲ ಭಾರತ ಮಹಿಳಾ ಸಾಂಸ್ಕøತಿಕ ಸಂಘಟನೆಯ ಜಿಲ್ಲಾ ಕಾರ್ಯದರ್ಶಿಗಳಾದ ಶ್ರೀಮತಿ ವಿಜಯಲಕ್ಷ್ಮಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಘಟನೆಯ ಪದಾಧಿಕಾರಿಗಳಾದ ಪದ್ಮಾ, ಗಿರಿಜಾ, ವಿದ್ಯಾ, ಸೌಮ್ಯ, ರೇಖಾ, ಅಭಿಲಾಷ, ಸುಜಾತ, ಬಸಮ್ಮ, ಪಾರ್ವತಮ್ಮ ಸೇರಿದಂತೆ ಬೆಂಬಲಿಗರು, ವಿದ್ಯಾರ್ಥಿನಿಯರು ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್