
ಕುಕನೂರು, 25 ನವೆಂಬರ್ (ಹಿ.ಸ.) :
ಆ್ಯಂಕರ್ : ಕುಕನೂರು ತಾಲೂಕು ಮಟ್ಟದ ಸಂವಿಧಾನ ದಿನಾಚರಣೆಯ ಕಾರ್ಯಕ್ರಮವನ್ನು ನಾಳೆ ಕುಕನೂರು ಪಟ್ಟಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಸಂವಿಧಾನ ದಿನಾಚರಣೆಯ ಅಂಗವಾಗಿ ಜಾಥಾ ಕಾರ್ಯಕ್ರಮವನ್ನು ಅಂದು ಬೆಳಿಗ್ಗೆ 10 ಗಂಟೆಗೆ ಕುಕನೂರು ಪಟ್ಟಣದ ಡಾ. ಆರ್. ಅಂಬೇಡ್ಕರ್ ವೃತ್ತದಿಂದ ಪಾರಂಭಿಸಿ ಕೋಳಿಪೇಟೆ, ಮಹಾಮಾಯಾ ದೇವಸ್ಥಾನದ ರಸ್ತೆ ಮತ್ತು ಶಿರೂರ ವೀರಭದ್ರಪ್ಪ ವೃತ್ತದ ಮುಖಾಂತರ ಪುನಃ ಡಾ. ಬಿ. ಆರ್. ಅಂಬೇಡ್ಕರ್ ವೃತ್ತದವರೆಗೆ ನಡೆಯಲಿದೆ. ನಂತರ ಅಲ್ಲಿ ವೇದಿಕೆ ಕಾರ್ಯಕ್ರಮ ಜರುಗಲಿದ್ದು, ಈ ಜಾಥಾ ಮತ್ತು ವೇದಿಕೆ ಕಾರ್ಯಕ್ರಮದಲ್ಲಿ ಎಲ್ಲಾ ತಾಲೂಕ ಮಟ್ಟದ ಅಧಿಕಾರಿಗಳು ವಿವಿಧ ಸಮುದಾಯಗಳ ಹಾಗೂ ಸಂಘ-ಸಂಸ್ಥೆಗಳ ಮುಖಂಡರುಗಳು, ಜನಪ್ರತಿನಿಧಿಗಳು, ಸ್ಥಳೀಯ ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು ಮತ್ತು ಮಾಧ್ಯಮ ಪ್ರತಿನಿಧಿಗಳು ಭಾಗವಹಿಸಿ ಯಶಸ್ವಿಗೊಳಿಸುವಂತೆ ಕುಕನೂರಿನ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಅಧ್ಯಕ್ಷರು ಹಾಗೂ ತಹಶೀಲ್ದಾರರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್