
ಯಲಬುರ್ಗಾ, 25 ನವೆಂಬರ್ (ಹಿ.ಸ.) :
ಆ್ಯಂಕರ್ : ಯಲಬುರ್ಗಾ ತಾಲೂಕು ಮಟ್ಟದ ಸಂವಿಧಾನ ದಿನಾಚರಣೆಯ ಕಾರ್ಯಕ್ರಮವನ್ನು ನಾಳೆ ಯಲಬುರ್ಗಾದಲ್ಲಿ ಹಮ್ಮಿಕೊಳ್ಳಲಾಗಿದೆ.
ಸಂವಿಧಾನ ದಿನಾಚರಣೆಯ ಪ್ರಯುಕ್ತ ಜಾಥಾ ಕಾರ್ಯಕ್ರಮವನ್ನು ಬೆಳಿಗ್ಗೆ 9.30 ಕ್ಕೆ ಯಲಬುರ್ಗಾ ಪಟ್ಟಣ ಪಂಚಾಯತ್ ಕಾರ್ಯಾಲಯದಿಂದ ಪ್ರಾರಂಭಿಸಿ ಅಂಬೇಡ್ಕರ್ ಸರ್ಕಲ್ ಮತ್ತು ಕನಕದಾಸ ಸರ್ಕಲ್ ಮುಖಾಂತರ ಬುದ್ಧ, ಬಸವ, ಅಂಬೇಡ್ಕರ್ ಭವನದವರೆಗೆ ನಡೆಯಲಿದೆ.
ಬುದ್ಧ, ಬಸವ, ಅಂಬೇಡ್ಕರ್ ಭವನದಲ್ಲಿ ವೇದಿಕೆ ಕಾರ್ಯಕ್ರಮ ಜರುಗಲಿದ್ದು, ಈ ಜಾಥಾ ಮತ್ತು ವೇದಿಕೆ ಕಾರ್ಯಕ್ರಮದಲ್ಲಿ ಎಲ್ಲಾ ತಾಲೂಕ ಮಟ್ಟದ ಅಧಿಕಾರಿಗಳು ವಿವಿಧ ಸಮುದಾಯಗಳ, ಸಂಘ-ಸಂಸ್ಥೆಗಳ ಮುಖಂಡರುಗಳು, ಜನಪ್ರತಿನಿಧಿಗಳು, ಸ್ಥಳೀಯ ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು ಹಾಗೂ ಮಾಧ್ಯಮ ಪ್ರತಿನಿಧಿಗಳು ಭಾಗವಹಿಸಿ ಯಶಸ್ವಿಗೊಳಿಸುವಂತೆ ಯಲಬುರ್ಗಾದ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಅಧ್ಯಕ್ಷರು ಹಾಗೂ ತಹಶೀಲ್ದಾರರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್