ಗಣಿಬಾಧಿತ ಪ್ರದೇಶಾಭಿವೃದ್ಧಿಗೆ ಅಧಿಕಾರಿಗಳ ಸಹಭಾಗಿತ್ವ
ಸಂಡೂರು, 25 ನವೆಂಬರ್ (ಹಿ.ಸ.) : ಆ್ಯಂಕರ್ : ಗಣಿಬಾಧಿತ ಪ್ರದೇಶಗಳ ಪುನರಾಭಿವೃದ್ದಿಗೆ ಅಧಿಕಾರಿಗಳ ಸಹಭಾಗಿತ್ವವು ಅಗತ್ಯವಾಗಿದೆ ಎಂದು ಕರ್ನಾಟಕ ಗಣಿ ಪರಿಸರ ಪುನಶ್ಚೇತನ ನಿಗಮದ ವ್ಯವಸ್ಥಾಪಕ ನಿರ್ದೇಶಕ ಡಾ.ಸಂಜಯ್ ಎಸ್ ಬಿಜ್ಜೂರ್ ಅವರು ಹೇಳಿದರು. ಸಂಡೂರು ತಾಲ್ಲೂಕಿನ ದೋಣಿಮಲೈ ಎನ್ಎಂಡಿಸಿಯ ಕಲಿಕಾ ಸ
ಗಣಿಬಾಧಿತ ಪ್ರದೇಶಾಭಿವೃದ್ಧಿಗೆ ಅಧಿಕಾರಿಗಳ ಸಹಭಾಗಿತ್ವ ಮುಖ್ಯ ವ್ಯವಸ್ಥಾಪಕ ನಿರ್ದೇಶಕ ಡಾ.ಸಂಜಯ್ ಎಸ್ ಬಿಜ್ಜೂರ್


ಗಣಿಬಾಧಿತ ಪ್ರದೇಶಾಭಿವೃದ್ಧಿಗೆ ಅಧಿಕಾರಿಗಳ ಸಹಭಾಗಿತ್ವ ಮುಖ್ಯ ವ್ಯವಸ್ಥಾಪಕ ನಿರ್ದೇಶಕ ಡಾ.ಸಂಜಯ್ ಎಸ್ ಬಿಜ್ಜೂರ್


ಗಣಿಬಾಧಿತ ಪ್ರದೇಶಾಭಿವೃದ್ಧಿಗೆ ಅಧಿಕಾರಿಗಳ ಸಹಭಾಗಿತ್ವ ಮುಖ್ಯ ವ್ಯವಸ್ಥಾಪಕ ನಿರ್ದೇಶಕ ಡಾ.ಸಂಜಯ್ ಎಸ್ ಬಿಜ್ಜೂರ್


ಸಂಡೂರು, 25 ನವೆಂಬರ್ (ಹಿ.ಸ.) :

ಆ್ಯಂಕರ್ : ಗಣಿಬಾಧಿತ ಪ್ರದೇಶಗಳ ಪುನರಾಭಿವೃದ್ದಿಗೆ ಅಧಿಕಾರಿಗಳ ಸಹಭಾಗಿತ್ವವು ಅಗತ್ಯವಾಗಿದೆ ಎಂದು ಕರ್ನಾಟಕ ಗಣಿ ಪರಿಸರ ಪುನಶ್ಚೇತನ ನಿಗಮದ ವ್ಯವಸ್ಥಾಪಕ ನಿರ್ದೇಶಕ ಡಾ.ಸಂಜಯ್ ಎಸ್ ಬಿಜ್ಜೂರ್ ಅವರು ಹೇಳಿದರು.

ಸಂಡೂರು ತಾಲ್ಲೂಕಿನ ದೋಣಿಮಲೈ ಎನ್ಎಂಡಿಸಿಯ ಕಲಿಕಾ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಸಂಡೂರು ತಾಲ್ಲೂಕಿನ ಗಣಿಬಾಧಿತ ಪ್ರದೇಶಗಳ ಪುನಶ್ಚೇತನ ಹಾಗೂ ಪುನರ್ವಸತಿ ಯೋಜನೆಯಡಿ ಕೈಗೊಳ್ಳಲಾದ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ರಾಜ್ಯ ಸರ್ಕಾರದ ನಿರ್ದೇಶನದಂತೆ ಗಣಿಬಾಧಿತ ಪ್ರದೇಶಗಳ ಗ್ರಾಮಗಳಲ್ಲಿ ಪುನರಾಭಿವೃದ್ಧಿಗೆ ಕೈಗೊಳ್ಳಲಾಗುತ್ತಿರುವ ಅಭಿವೃದ್ಧಿ ಕಾಮಗಾರಿಗಳ ಕುರಿತು ಪ್ರತಿ ಆರು ತಿಂಗಳಿಗೊಮ್ಮೆ ಸುಪ್ರೀಂ ಕೋರ್ಟ್ ಗೆ ವರದಿ ಸಲ್ಲಿಸಬೇಕಾಗಿರುತ್ತದೆ. ಹಾಗಾಗಿ ಅಧಿಕಾರಿಗಳು ಮುತುವರ್ಜಿ ವಹಿಸಿ ವಿಳಂಬವಿಲ್ಲದೇ ಯೋಜನೆಗಳನ್ನು ಅನುಷ್ಠಾನಗೊಳಿಸಬೇಕು ಎಂದು ತಿಳಿಸಿದರು.

ಗಣಿ ಬಾಧಿತ ಪ್ರದೇಶಗಳಿಗೆ ತೆರಳಿ ಅಲ್ಲಿನ ಗ್ರಾಮಗಳಲ್ಲಿನ ಕುಂದುಕೊರತೆಗಳ ಬಗ್ಗೆ ಗಮನ ಹರಿಸಬೇಕು. ಸ್ಥಳೀಯ ಅಧಿಕಾರಿಗಳು ಗ್ರಾಮೀಣ ಭಾಗಕ್ಕೆ ತೆರಳಿ ರಸ್ತೆಗಳ ಸ್ಥಿತಿಗಳ ಕುರಿತು ಸಮಗ್ರ ತನಿಖೆ ನಡೆಸಬೇಕು. ಪ್ರತಿಯೊಂದು ರಸ್ತೆ ಕಾಮಗಾರಿಗೆ ಪ್ರತ್ಯೇಕ ಪ್ರಸ್ತಾವನೆಗಳನ್ನು ಸಲ್ಲಿಸುವ ಬದಲು ಆದ್ಯತೆಯ ರಸ್ತೆಗಳಿಗೆ ಸಮಗ್ರ ಪ್ರಸ್ತಾವನೆಯನ್ನು ಸಲ್ಲಿಸುವಂತೆ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

*ಪ್ರತಿ ಮಂಗಳವಾರ ಸಭೆ ನಡೆಸಿ:*

ಸಂಡೂರು ಮತ್ತು ಬಳ್ಳಾರಿ ತಾಲ್ಲೂಕು ಭಾಗದ ಗಣಿಬಾಧಿತ ಪ್ರದೇಶಗಳಲ್ಲಿ ಅನುಷ್ಠಾನಗೊಳಿಸುವ ಕುಡಿಯುವ ನೀರು, ನೈರ್ಮಲ್ಯ, ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಒತ್ತುವರಿಗೆ ಸಂಬಂಧಿಸಿದಂತೆ ತಹಶೀಲ್ದಾರ, ಉಪವಿಭಾಗಾಧಿಕಾರಿ ಹಾಗೂ ಸಂಬಂಧಿಸಿದ ಅಧಿಕಾರಿಗಳು ಪ್ರತಿ ಮಂಗಳವಾರ ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಬೇಕು ಮತ್ತು ವಸತಿಗೆ ಸಂಬಂಧಿಸಿದಂತೆ ಜಿಪಂ ಸಿಇಒ ಅವರೊಂದಿಗೆ ಸಭೆ ನಡೆಸಿ ಬೇಕಾದ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.

ಗಣಿಬಾಧಿತ ಪ್ರದೇಶಗಳ ವ್ಯಾಪ್ತಿಯ ಜನರ ಜೀವನೋಪಾಯಕ್ಕಾಗಿ ಯಾವ ರೀತಿಯ ಸುಧಾರಣೆಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂಬುದನ್ನು ಗಮನದಲ್ಲಿಟ್ಟುಕೊಂಡು ಪ್ರಸ್ತಾವನೆ ಸಲ್ಲಿಸಬೇಕು. ವಿವಿಧ ಇಲಾಖೆಗಳ ಕೆಲವು ಪ್ರಸ್ತಾವನೆಗಳು ಬಾಕಿ ಇವೆ. ಆದಷ್ಟು ಶೀಘ್ರವಾಗಿ ಪ್ರಸ್ತಾವನೆ ಸಲ್ಲಿಸಬೇಕು. ಈಗಾಗಲೇ ಸಲ್ಲಿಸಲಾಗಿರುವ ಪ್ರಸ್ತಾವನೆಗಳಲ್ಲಿ ಸೇರಿಸುವ ಮತ್ತು ತೆಗೆದುಹಾಕುವ ಮಾಹಿತಿ ಇದ್ದಲ್ಲಿ ಪರಿಷ್ಕೃತ ಪ್ರಸ್ತಾವನೆ ಸಲ್ಲಿಸಬೇಕು. ಅನುಮೋದನೆ ನಂತರ ವಿಸ್ತೃತ ಯೋಜನಾ ವರದಿ ತಯಾರಿಸಬೇಕು ಎಂದರು.

ತಾಲ್ಲೂಕಿನ ವಿದ್ಯಾರ್ಥಿ ನಿಲಯಗಳ ದುರಸ್ತಿ ಕಾರ್ಯಕ್ಕಾಗಿ ಅನುಮೋದನೆ ನೀಡಲಾಗಿದ್ದು, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ತಮ್ಮ ವ್ಯಾಪ್ತಿಯ ವಿದ್ಯಾರ್ಥಿ ನಿಲಯಗಳನ್ನು ದುರಸ್ತಿಗಾಗಿ ವಿಸ್ತøತಾ ಯೋಜನೆ ವರದಿ ತಯಾರಿಸಿ ಪಿಡಬ್ಲ್ಯೂಡಿ ಅಧಿಕಾರಿಗಳಿಗೆ ಸಲ್ಲಿಸಿ, ಕಾಮಗಾರಿ ಆರಂಭಿಸುವಂತೆ ಒತ್ತಾಯಿಸಬೇಕು ಎಂದು ಮಾರ್ಗದರ್ಶನ ಮಾಡಿದರು.

ಜಿಲ್ಲೆಯ ಗಣಿಬಾಧಿತ ತಾಲ್ಲೂಕುಗಳ ವ್ಯಾಪ್ತಿಯಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ವಿದ್ಯಾರ್ಥಿಗಳಿಗೆ ಪೂರಕ ಪೌಷ್ಠಿಕ ಆಹಾರ ವಿತರಣೆ ಅನುಷ್ಠಾನಗೊಂಡಿದ್ದು, ಈ ಯೋಜನೆ ಸಮರ್ಪಕ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಮೇಲ್ವಿಚಾರಣೆ ವ್ಯವಸ್ಥೆಗೆ ಅಗತ್ಯ ಕ್ರಮ ವಹಿಸಬೇಕು ಎಂದು ಡಿಡಿಪಿಐ ಮತ್ತು ಬಿಸಿಯೂಟ ಯೋಜನೆ ಅಧಿಕಾರಿಗಳಿಗೆ ತಿಳಿಸಿದರು.

ಸಭೆಗೆ ಗೈರಾದ ಆಯುಷ್ ಅಧಿಕಾರಿ ಸೇರಿದಂತೆ ಇತರೆ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡುವಂತೆ ತಾಕೀತು ಮಾಡಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪನಿರ್ದೇಶಕರಾದ ದ್ವಿತೀಯ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಾಗೂ ಸಂಡೂರು ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande