
ವಿಜಯಪುರ, 26 ನವೆಂಬರ್ (ಹಿ.ಸ.) :
ಆ್ಯಂಕರ್ : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮುಖ್ಯಮಂತ್ರಿ ಆಗಬೇಕು. ಅವರು ಮುಖ್ಯಮಂತ್ರಿ ಆಗಲು ಅತ್ಯಂತ ಸೂಕ್ತ ವ್ಯಕ್ತಿ ಎಂದು ಸಚಿವ ಶಿವಾನಂದ ಪಾಟೀಲ ಖರ್ಗೆ ಪರ ಬ್ಯಾಟಿಂಗ್ ಮಾಡಿದರು.
ವಿಜಯಪುರ ನಗರದಲ್ಲಿ ಮಾತನಾಡಿದ ಅವರು, ಖರ್ಗೆ ವಿಚಾರದಲ್ಲಿ ಒಂದು ಕಾಲದಲ್ಲಿ ನಾನೇ ತಪ್ಪು ಮಾಡಿದ್ದೇನೆ. ತಪ್ಪು ಮಾಡಿದ್ದನ್ನು ಒಪ್ಪಿಕೊಳ್ಳುತ್ತೇನೆ. ಇನ್ನು ಹೈಕಮಾಂಡ್ ಮಟ್ಟದಲ್ಲಿ ನಿರ್ಧಾರ ಆಗುತ್ತದೆ. ಪಕ್ಷದ ವರಿಷ್ಟರು ಎಲ್ಲರೂ ಸೇರಿ ನಿರ್ಧಾರ ಮಾಡುತ್ತಾರೆ ಎಂದರು.
ರಾಜಕಾರಣದಲ್ಲಿ ಕ್ಲಿಯರ್ ಆಗಿ ಹೇಳಲ್ಲ. ಮುಖ್ಯಮಂತ್ರಿ ಆಗಲು ಯಾರಿಗೆ ಆಸೆ ಇಲ್ಲ. ನಮ್ಮಲ್ಲಿ ಮುಖ್ಯಮಂತ್ರಿ ರೇಸ್‌ನಲ್ಲಿ ಬಹಳ ಜನರಿದ್ದಾರೆ. ಅವರೆಲ್ಲ ಬಹಳ ದುಡಿದಿದ್ದಾರೆ. ಮುಖ್ಯಮಂತ್ರಿ ಆದರೆ ತಪ್ಪೆನಿದೆ. ನಮಗೆ ಸಚಿವರಾಗೋ ಆಸೆಯಿದ್ದ ಹಾಗೆ ಅವರಿಗೆ ಮುಖ್ಯಮಂತ್ರಿ ಆಗೋ ಆಸೆ ಇರುತ್ತದೆ. ಮುಖ್ಯಮಂತ್ರಿ ಸ್ಥಾನ ಒಂದೇ ಇದ್ದರೂ ಹಿರಿಯ ಮೂವರು ಆಕಾಂಕ್ಷಿಗಳಿದ್ದಾರೆ. ಯಾರು ಮುಖ್ಯಮಂತ್ರಿ ಆಗಬೇಕೆಂದು ಸಿಎಲ್ಪಿ ಹಾಗೂ ಹೈಕಮಾಂಡ್ ನಿರ್ಧಾರ ಮಾಡುತ್ತದೆ ಎಂದರು.
ಹಿಂದೂಸ್ತಾನ್ ಸಮಾಚಾರ್ / jyothi deshpande