ಬಾಲ್ಯವಿವಾಹ ಸವಾಲುಗಳು ಮತ್ತು ಪರಿಹಾರ ; ನಾಳೆ ರಾಜ್ಯ ಮಟ್ಟದ ಕಾರ್ಯಾಗಾರ
ನಾಳೆ
Child Marriage Challenges and Solutions; State Level Workshop on Nov. 27


Child Marriage Challenges and Solutions; State Level Workshop on Nov. 27


ಬಳ್ಳಾರಿ, 26 ನವೆಂಬರ್ (ಹಿ.ಸ.) :

ಆ್ಯಂಕರ್ : ರೀಡ್ಸ್ ಸಂಸ್ಥೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮತ್ತು ಸಿಎಸಿಎಲ್-ಕೆ ಇವರ ಸಂಯುಕ್ತಾಶ್ರಯದಲ್ಲಿ ನಾಳೆ ಬೆಳಿಗ್ಗೆ 10.30 ಗಂಟೆಗೆ ಬಿಡಿಎಎ ಸಭಾಂಗಣದಲ್ಲಿ ‘ಬಾಲ್ಯವಿವಾಹ ತಡೆಗಟ್ಟುವಲ್ಲಿ ಸವಾಲುಗಳು ಮತ್ತು ಪರಿಹಾರಗಳು’ ಎಂಬ ವಿಷಯದ ಕುರಿತು ಒಂದು ದಿನದ ರಾಜ್ಯಮಟ್ಟದ ಕಾರ್ಯಾಗಾರ ಏರ್ಪಡಿಸಲಾಗಿದೆ.

ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಅಧ್ಯಕ್ಷ ಶಶಿಧರ ಕೋಸಂಬೆ ಅವರು ಕಾರ್ಯಾಗಾರ ಉದ್ಘಾಟಿಸುವರು. ರೀಡ್ಸ್ ಸಂಸ್ಥೆ ಕಾರ್ಯನಿರ್ವಾಹಕ ನಿರ್ದೇಶಕ ಸಿ.ತಿಪ್ಪೇಶಪ್ಪ ಅವರು ಅಧ್ಯಕ್ಷತೆ ವಹಿಸುವರು.

ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ., ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರಿಸ್ ಸುಮೇರ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್.ಎನ್.ಹೊಸಮನೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ.ವಿ.ಜೆ ವಿಶೇಷ ಆಹ್ವಾನಿತರಾಗಿ ಭಾಗವಹಿಸುವರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ರಾಮಕೃಷ್ಣ ನಾಯಕ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕಿ ಬಿ. ಉಮಾದೇವಿ, ಡಿ.ವೈ.ಎಸ್.ಪಿ ಹಾಗೂ ಎಸ್.ಜೆ.ಪಿ.ಯು ಹಿರಿಯ ಮಕ್ಕಳ ಕಲ್ಯಾಣ ಪೊಲೀಸ್ ಅಧಿಕಾರಿ ಚಂದ್ರಕಾ0ತ ನಂದಾರೆಡ್ಡಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಮಕ್ಕಳ ರಕ್ಷಣಾಧಿಕಾರಿ ಸುಭದ್ರಾದೇವಿ ಮುಖ್ಯ ಅಥಿತಿಗಳಾಗಿ ಭಾಗವಹಿಸುವರು.

ಸಂಜೆ 04.30 ಗಂಟೆಗೆ ಸಮಾರೋಪ ಸಮಾರಂಭ : ಸಂಜೆ 04.30 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಕೆ.ಜಿ.ಶಾಂತಿ ಅವರು ಘನ ಉಪಸ್ಥಿತರಿರುವರು.

ರೀಡ್ಸ್ ಸಂಸ್ಥೆ ಕಾರ್ಯನಿರ್ವಾಹಕ ನಿರ್ದೇಶಕ ಸಿ. ತಿಪ್ಪೇಶಪ್ಪ ಅವರು ಅಧ್ಯಕ್ಷತೆ ವಹಿಸುವರು. ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ನಿಕಟಪೂರ್ವ ಅಧ್ಯಕ್ಷ ಹೆಚ್.ಸಿ ರಾಘವೇಂದ್ರ ಅವರು ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸುವರು.

ಮೈಸೂರಿನ ಆರ್‌ಎಲ್‌ಎಚ್‌ಪಿಯ ಕಾರ್ಯನಿರ್ವಾಹಕ ನಿದೇರ್ಶಕರು ಹಾಗೂ ಸಿಎಸಿಎಲ್‌ಕೆ ಸಂಚಾಲಕರಾದ ಸರಸ್ವತಿ ಸೇರಿದಂತೆ ಇತರರು ಉಪಸ್ಥಿತರಿರುವರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande