
ಸಂಡೂರು, 26 ನವೆಂಬರ್ (ಹಿ.ಸ.) :
ಆ್ಯಂಕರ್ : ಸಂಡೂರು ತಾಲ್ಲೂಕಿನ ಗೊಲ್ಲಲಿಂಗಮ್ಮನಹಳ್ಳಿ ಗ್ರಾಮದ ಗಿರಿಯಪ್ಪ (85) ನ.17 ರಂದು ಮಗಳ ಮನೆಯಿಂದ ರಾಂಪುರಕ್ಕೆ ಹೋಗಿ ಬರುವುದಾಗಿ ಹೇಳಿ ಕಾಣೆಯಾಗಿರುವ ಕುರಿತು ಚೋರನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಠಾಣಾಧಿಕಾರಿ ಮನವಿ ಮಾಡಿದ್ದಾರೆ.
ಚಹರೆ ಗುರುತು : ಅಂದಾಜು 5.7 ಅಡಿ ಎತ್ತರ, ಕೋಲು ಮುಖ, ಗೋಧಿ ಮೈಬಣ್ಣ ಹೊಂದಿದ್ದು, ಕಾಣೆಯಾದ ಸಂದರ್ಭದಲ್ಲಿ ಬಿಳಿ ಬಣ್ಣದ ತುಂಬು ತೋಳಿನ ಅಂಗಿ ಹಾಗೂ ಬಿಳಿ ಬಣ್ಣದ ಲುಂಗಿ ಧರಿಸಿರುತ್ತಾನೆ.
ವ್ಯಕ್ತಿಯ ಬಗ್ಗೆ ಮಾಹಿತಿ ಸಿಕ್ಕಲ್ಲಿ ಚೋರನೂರು ಪೊಲೀಸ್ ಠಾಣೆಯ ದೂ.08395-295100, ಪಿಎಸ್‌ಐ ಮೊ.9480803063, ಸಂಡೂರು ಸಿಪಿಐ ಮೊ.9480803036, ತೋರಣಗಲ್ಲು ಡಿಎಸ್‌ಪಿ ಮೊ.9480803010 ಗೆ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್