ವ್ಯಕ್ತಿ ಕಾಣೆ ; ಪತ್ತೆಗೆ ಮನವಿ
ಬಳ್ಳಾರಿ, 26 ನವೆಂಬರ್ (ಹಿ.ಸ.) : ಆ್ಯಂಕರ್ : ನಗರದ ಬ್ರೂಸ್ ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಮಲ್ಲಿಕಾರ್ಜುನ ಎನ್ನುವ 59 ವರ್ಷದ ವ್ಯಕ್ತಿಯು ಕೆಲಸಕ್ಕೆ ಹೋಗುತ್ತೇನೆ ಎಂದು ನ.25 ರಂದು ಹೇಳಿಹೋದವನು ಮನೆಗೆ ಬಾರದೇ ಕಾಣೆಯಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಬ್ರೂಸ್ ಪೇಟೆ ಪೊಲೀಸ್ ಠಾಣೆಯ ಪ
ವ್ಯಕ್ತಿ ಕಾಣೆ; ಪತ್ತೆಗೆ ಮನವಿ


ಬಳ್ಳಾರಿ, 26 ನವೆಂಬರ್ (ಹಿ.ಸ.) :

ಆ್ಯಂಕರ್ : ನಗರದ ಬ್ರೂಸ್ ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಮಲ್ಲಿಕಾರ್ಜುನ ಎನ್ನುವ 59 ವರ್ಷದ ವ್ಯಕ್ತಿಯು ಕೆಲಸಕ್ಕೆ ಹೋಗುತ್ತೇನೆ ಎಂದು ನ.25 ರಂದು ಹೇಳಿಹೋದವನು ಮನೆಗೆ ಬಾರದೇ ಕಾಣೆಯಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಬ್ರೂಸ್ ಪೇಟೆ ಪೊಲೀಸ್ ಠಾಣೆಯ ಪೊಲೀಸ್ ಠಾಣಾಧಿಕಾರಿ ಮನವಿ ಮಾಡಿದ್ದಾರೆ.

ಕಾಣೆಯಾದ ವ್ಯಕ್ತಿಯ ಚಹರೆ ಗುರುತು: ಎತ್ತರ 6 ಅಡಿ, ಎಣ್ಣೆಗೆಂಪು ಮೈ ಬಣ್ಣ, ಕೋಲುಮುಖ, ತೆಳುವಾದ ಮೈಕಟ್ಟು, ತಲೆಯ ಮೇಲೆ ಕಪ್ಪು ಮತ್ತು ಬಿಳಿ ಬಣ್ಣದ ಕೂದಲು ಹೊಂದಿದ್ದು, ಎಡತೋಳಿನ ರಟ್ಟಿಯ ಮೇಲೆ ಬಳಿ ಸುಟ್ಟ ಗಾಯದ ಗುರುತು ಮತ್ತು ಬಲಗಾಲಿನ ಬೆರಳುಗಳಲ್ಲಿನ ಎರಡನೇ ಬೆರಳು ಕತ್ತರಿಸಿರುತ್ತದೆ.

ಕಾಣೆಯಾದ ಸಂದರ್ಭದಲ್ಲಿ ಬಿಳಿ ಅಂಗಿ ಹಾಗೂ ಕೆಂಪು ಬಣ್ಣ ಲುಂಗಿಯನ್ನು ಧರಿಸಿರುತ್ತಾನೆ. ತೆಲುಗು, ಕನ್ನಡ ಭಾಷೆ ಮಾತನಾಡುತ್ತಾನೆ.

ಮೇಲ್ಕಂಡ ಚಹರೆಯುಳ್ಳ ವ್ಯಕ್ತಿಯ ಬಗ್ಗೆ ಮಾಹಿತಿ ಸಿಕ್ಕಲ್ಲಿ ಬ್ರೂಸ್ ಪೇಟೆ ಪೊಲೀಸ್ ಠಾಣೆಯ ಪಿ.ಎಸ್.ಐ ಮೊ.9480803045, ಪಿ.ಐ ಮೊ.9480803845, ಅಥವಾ ಬಳ್ಳಾರಿ ಕಂಟ್ರೋಲ್ ರೂಂ ದೂ.08392-258100 ಗೆ ಸಂಪರ್ಕಿಸಬಹುದು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande