ನಾಳೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಅಧ್ಯಕ್ಷ ಶಶಿಧರ್ ಕೋಸಂಬೆ ಬಳ್ಳಾರಿಗೆ
ಬಳ್ಳಾರಿ, 26 ನವೆಂಬರ್ (ಹಿ.ಸ.) : ಆ್ಯಂಕರ್ : ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಅಧ್ಯಕ್ಷರಾದ ಶಶಿಧರ್ ಕೋಸಂಬೆ ಅವರು ನಾಳೆ ಬಳ್ಳಾರಿಗೆ ಆಗಮಿಸಲಿದ್ದಾರೆ. ನಾಳೆ ಬೆಳಿಗ್ಗೆ 10 ಗಂಟೆಗೆ ನಗರದ ಬಿಡಿಎಎ ಸಭಾಂಗಣದಲ್ಲಿ ಏರ್ಪಡಿಸಿರುವ ಬಾಲ್ಯ ವಿವಾಹ ತಡೆಗಟ್ಟುವಲ್ಲಿ ಸವಾಲುಗಳು ಮತ್ತು
ನಾಳೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಅಧ್ಯಕ್ಷ ಶಶಿಧರ್ ಕೋಸಂಬೆ ಬಳ್ಳಾರಿಗೆ


ಬಳ್ಳಾರಿ, 26 ನವೆಂಬರ್ (ಹಿ.ಸ.) :

ಆ್ಯಂಕರ್ : ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಅಧ್ಯಕ್ಷರಾದ ಶಶಿಧರ್ ಕೋಸಂಬೆ ಅವರು ನಾಳೆ ಬಳ್ಳಾರಿಗೆ ಆಗಮಿಸಲಿದ್ದಾರೆ.

ನಾಳೆ ಬೆಳಿಗ್ಗೆ 10 ಗಂಟೆಗೆ ನಗರದ ಬಿಡಿಎಎ ಸಭಾಂಗಣದಲ್ಲಿ ಏರ್ಪಡಿಸಿರುವ ಬಾಲ್ಯ ವಿವಾಹ ತಡೆಗಟ್ಟುವಲ್ಲಿ ಸವಾಲುಗಳು ಮತ್ತು ಪರಿಹಾರಗಳು ಎಂಬ ವಿಷಯದ ಕುರಿತು ಒಂದು ದಿನದ ರಾಜ್ಯ ಮಟ್ಟದ ಕಾರ್ಯಾಗಾರ ಕಾರ್ಯಕ್ರಮದಲ್ಲಿ ಭಾಗವಹಿಸುವರು.

ಬಳಿಕ ಮಧ್ಯಾಹ್ನ 02 ಗಂಟೆಗೆ ಬಳ್ಳಾರಿ ನಗರದ ಅಂಗನವಾಡಿ ಕೇಂದ್ರಗಳು, ಪೊಲೀಸ್ ಠಾಣೆ, ಮಕ್ಕಳ ಪಾಲನಾ ಸಂಸ್ಥೆ, ದತ್ತು ಕೇಂದ್ರ, ವಸತಿ ನಿಲಯ, ಶಾಲೆ, ಜಿಲ್ಲಾ ಆಸ್ಪತ್ರೆ ಭೇಟಿ ನೀಡಿ ಪರಿಶೀಲನೆ ನಡೆಸುವರು.

ನಂತರ ರಾತ್ರಿ 08 ಗಂಟೆಗೆ ಬಳ್ಳಾರಿಯಿಂದ ಬೆಂಗಳೂರಿಗೆ ಪ್ರಯಾಣಿಸುವರು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಕಾರ್ಯದರ್ಶಿಗಳು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande