ಅಲ್ಲಿಪುರ ಗ್ರಾಮದ ಬಾಲಕ ಕಾಣೆ
ಬಳ್ಳಾರಿ, 27 ನವೆಂಬರ್ (ಹಿ.ಸ.) : ಆ್ಯಂಕರ್ : ನಗರದ ಅಲ್ಲಿಪುರ ಗ್ರಾಮದ ಸುಗ್ಗಲಮ್ಮ ಗುಡಿ ಹತ್ತಿರ ಶಂಕರ.ಕೆ(11) ಮನೆಯಿಂದ ಆಟವಾಡಲು ಹೋಗಿ ಬರುವುದಾಗಿ ಹೇಳಿ ಮರಳಿ ಬಾರದೇ ಕಾಣೆಯಾಗಿರುವ ಕುರಿತು ಬಳ್ಳಾರಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಅಸಿಸ್ಟೆಂಟ್ ಸಬ್ ಇನ್ಸ್‍ಪೆಕ್ಟರ್ ತಿಳಿಸಿ
ಅಲ್ಲಿಪುರ ಗ್ರಾಮದ ಬಾಲಕ ಕಾಣೆ


ಬಳ್ಳಾರಿ, 27 ನವೆಂಬರ್ (ಹಿ.ಸ.) :

ಆ್ಯಂಕರ್ : ನಗರದ ಅಲ್ಲಿಪುರ ಗ್ರಾಮದ ಸುಗ್ಗಲಮ್ಮ ಗುಡಿ ಹತ್ತಿರ ಶಂಕರ.ಕೆ(11) ಮನೆಯಿಂದ ಆಟವಾಡಲು ಹೋಗಿ ಬರುವುದಾಗಿ ಹೇಳಿ ಮರಳಿ ಬಾರದೇ ಕಾಣೆಯಾಗಿರುವ ಕುರಿತು ಬಳ್ಳಾರಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಅಸಿಸ್ಟೆಂಟ್ ಸಬ್ ಇನ್ಸ್‍ಪೆಕ್ಟರ್ ತಿಳಿಸಿದ್ದಾರೆ.

ಚಹರೆ ಗುರುತು

ಅಂದಾಜು 04 ಅಡಿ ಎತ್ತರ, ಕೋಲು ಮುಖ, ಕಪ್ಪು ಮೈಬಣ್ಣ, ಕಪ್ಪು ಕೂದಲು, ತೆಳುವಾದ ಮೈಕಟ್ಟು ಹೊಂದಿದ್ದು, ಮೂಗಿನ ಹತ್ತಿರ ಗಾಯ ಇರುತ್ತದೆ. ಕಾಣೆಯಾದ ಸಂದರ್ಭದಲ್ಲಿ ಹಸಿರು ಬಣ್ಣದ ಅರ್ಧ ತೋಳಿನ ಟಿ-ಶರ್ಟ್ ಹಾಗೂ ನೀಲಿ ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ. ಕನ್ನಡ ಮತ್ತು ತೆಲುಗು ಭಾಷೆ ಮಾತನಾಡುತ್ತಾನೆ.

ಬಾಲಕನ ಬಗ್ಗೆ ಮಾಹಿತಿ ಸಿಕ್ಕಲ್ಲಿ ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆಯ ದೂ.08392-276461, ಮೊ.9480803049 ಅಥವಾ ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ ದೂ.08392-258100 ಗೆ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande