
ವಿಜಯಪುರ, 27 ನವೆಂಬರ್ (ಹಿ.ಸ.) :
ಆ್ಯಂಕರ್ : ನಿಮ್ಮ ಹಣ, ನಿಮ್ಮ ಹಕ್ಕುಅಭಿಯಾನದಡಿ ನಿಷ್ಕ್ರಿಯ ಖಾತೆಗಳು -ಹಕ್ಕು ಪಡೆಯದ ಠೇವಣಿಗಳ ಕುರಿತು ಜಾಗೃತಿ ಕಾರ್ಯಕ್ರಮವನ್ನು ನವೆಂಬರ್ 28 ರಂದು ಮಧ್ಯಾಹ್ನ 3 ಗಂಟೆಗೆ ಕೇಂದ್ರ ಸರ್ಕಾರದ ಹಣಕಾಸು ಸೇವೆಗಳ ಇಲಾಖೆ, ಹಣಕಾಸು ಸಚಿವಾಲಯ ಹಾಗೂ ಆರ್‌ಬಿಐ, ಎಸ್‌ಎಲ್‌ಬಿಸಿ ಮತ್ತು ಜಿಲ್ಲಾಡಳಿತದ ನಿರ್ದೇಶನದಂತೆ ನಗರದ ಜಿಲ್ಲಾ ಪಂಚಾಯತಿಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ನಿಷ್ಕ್ರಿಯ ಖಾತೆಗಳು- ಹಕ್ಕು ಪಡೆಯದ ಠೇವಣಿಗಳು, ವಿಮಾ ಪಾಲಿಸಿ ಮೊತ್ತ, ಷೇರುಗಳನ್ನು ಇತ್ಯರ್ಥಪಡಿಸಲು
ಈ ಅಭಿಯಾನವನ್ನು ಹಣಕಾಸು ಸೇವೆಗಳ ಇಲಾಖೆಯು ದಿನಾಂಕ: 01.10.2025 ರಿಂದ 31.12.2025 ರವರೆಗೆ ಆರಂಭಿಸಲಾಗಿದೆ.
ದಾಖಲೆ ಅನುಸಾರ ಜಿಲ್ಲೆಯಲ್ಲಿ 3,14,490 ನಿಷ್ಕ್ರಿಯ ಖಾತೆಗಳಲ್ಲಿ 83.43 ಕೋಟಿ ರೂ.ಇದ್ದು, ಗ್ರಾಹಕರು ಈ ಸೌಲಭ್ಯ ಬಳಸಿಕೊಳ್ಳಬಹುದಾಗಿದೆ.
10 ವರ್ಷಕ್ಕೂ ಹೆಚ್ಚಿನ ಅವಧಿಯಿಂದ ಬಾಕಿ ಇರುವ ನಿಷ್ಕ್ರಿಯ ಖಾತೆಗಳನ್ನು ಸಮಾಪನೆಗೊಳಿಸುವ ಮೂಲಕ ಅಥವಾ ಅಗತ್ಯ ದಾಖಲೆಗಳನ್ನು ಸಲ್ಲಿಸುವ ಮೂಲಕ ಕೆವೈಸಿ ಮಾಡಿಸಿಕೊಳ್ಳುವ ಮೂಲಕ ನಿಷ್ಕ್ರಿಯ ಖಾತೆಗಳನ್ನು ಮರು-ಸಕ್ರಿಯಗೊಳಿಸಿಕೊಳ್ಳಬಹುದಾಗಿದೆ.
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ವೆಬ್ ಸೈಟ್ https://udgam.rbi.org.in ಮೂಲಕವಾಗಲಿ ಹಾಗೂ ತಮ್ಮ ಹತ್ತಿರದ ಬ್ಯಾಂಕ್ ಶಾಖೆ,ಎಲ್‌ಐಸಿ ಕಚೇರಿಗೆ ಭೇಟಿ ನೀಡಿ, ಕೆವೈಸಿಗಾಗಿ ಅಗತ್ಯ ದಾಖಲೆಗಳನ್ನು ಸಲ್ಲಿಸಿ, ತಮ್ಮ ಖಾತೆಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ ಎಂದು ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರುಗಳಾದ ರಿಷಿ ಆನಂದ್ ಅವರು ತಿಳಿಸಿದ್ದಾರೆ ಎಂದು ಜಿಲ್ಲಾ ಅಗ್ರಣೀಯ ಬ್ಯಾಂಕಿನ ವ್ಯವಸ್ಥಾಪಕರಾದ ಬಿ.ಸಿದ್ದಯ್ಯ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / jyothi deshpande