ಆರೋಗ್ಯ ಸಂಜೀವಿನಿ ಎಲ್ಲಾ ಖಾಸಗಿ ಆಸ್ಪತ್ರೆಗಳಿಗೆ ವಿಸ್ತರಿಸಲು ಮನವಿ
ಆರೋಗ್ಯ ಸಂಜೀವಿನಿ ಎಲ್ಲಾ ಖಾಸಗಿ ಆಸ್ಪತ್ರೆಗಳಿಗೆ ವಿಸ್ತರಿಸಲು ಮನವಿ
ಚಿತ್ರ : ಆರೋಗ್ಯ ಸಂಜೀವಿನಿ ಎಲ್ಲಾ ಖಾಸಗಿ ಆಸ್ಪತ್ರೆಗಳಿಗೆ ವಿಸ್ತರಿಸುವಂತೆ ಕೋಲಾರ ಜಿಲ್ಲಾ ಸರ್ಕಾರಿ ನೌಕರರ ಸಂಘದಿಂದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಶ್ರೀನಿವಾಸ್ ಮನವಿ ಸಲ್ಲಿಸಿ ಒತ್ತಾಯಿಸಲಾಯಿತು.


ಕೋಲಾರ, ೨೭ ನವೆಂಬರ್(ಹಿ.ಸ.) :

ಆ್ಯಂಕರ್ : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯಡಿ ಜಿಲ್ಲೆಯ ಎಲ್ಲಾ ಖಾಸಗಿ ಆಸ್ಪತ್ರೆಗಳು ಹಾಗೂ ನಸಿಂಗ್ ಹೋಂಗಳನ್ನು ನೋಂದಾಯಿಸಿಕೊಂಡು ಸರ್ಕಾರಿ ನೌಕರರಿಗೆ ಅಗತ್ಯ ವೈದ್ಯಕೀಯ ಚಿಕಿತ್ಸೆಗಳನ್ನು ಒದಗಿಸುವಂತೆ ಜಿಲ್ಲಾ ಸರ್ಕಾರಿ ನೌಕರರ ಸಂಘವು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಶ್ರೀನಿವಾಸ್ ಮನವಿ ಸಲ್ಲಿಸಿ ಒತ್ತಾಯಿಸಿದರು.

ಜಿಲ್ಲಾ ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಎ.ಅಜಯ್ ಕುಮಾರ್ ಮಾತನಾಡಿ ರಾಜ್ಯದ ಸರ್ಕಾರಿ ನೌಕರರು ಹಾಗೂ ಅವರ ಅವಲಂಬಿತರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆಗಳನ್ನು ಒದಗಿಸಲು ರಾಜ್ಯ ಸರ್ಕಾರ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಜಾರಿಗೊಳಿಸಿದೆ. ಅದರಂತೆ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಜೊತೆ ಖಾಸಗಿ ಆಸ್ಪತ್ರೆಗಳನ್ನು ನೋಂದಾಯಿಸಲು ಆದೇಶಿಸಲಾಗಿದ್ದು ಕೋಲಾರ ಜಿಲ್ಲೆಯ ಎಲ್ಲಾ ಆಸ್ಪತ್ರೆಗಳಲ್ಲಿ ನೋಂದಣಿ ಮಾಡದಿರುವುದರಿಂದ ಸರ್ಕಾರಿ ನೌಕರರಿಗೆ ಅನುಕೂಲವಾಗುವಂತೆ ಮಾಡಬೇಕು ಎಂದು ಮನವಿ ಮಾಡಿದರು.

ಆಧುನಿಕ ವೈದ್ಯಕೀಯ ಸವಲತ್ತುಗಳನ್ನು ಹೊಂದಿರುವ ಆಸ್ಪತ್ರೆಗಳು ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯಡಿ ನೋಂದಣಿಯಾದಲ್ಲಿ ಲಕ್ಷಾಂತರ ರಾಜ್ಯ ಸರ್ಕಾರಿ ನೌಕರರಿಗೆ, ಅವಲಂಬಿತರು ನಿರಾಂತಕವಾಗಿ ವೈದ್ಯಕೀಯ ಸೌಲಭ್ಯಗಳನ್ನು ಪಡೆಯಲು ಅನುಕೂಲವಾಗಲಿದೆ ಎಂದು ತಿಳಿಸಿದರು.

ಈ ಸಂದರ್ಭ ಜಿಲ್ಲಾ ಸರ್ಕಾರಿ ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯ ಶ್ರೀನಿವಾಸರೆಡ್ಡಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸತೀಶ್, ಖಜಾಂಚಿ ಮುರಳಿ ಮೋಹನ್, ಜಿಲ್ಲಾ ಗೌರವ ಅಧ್ಯಕ್ಷ ಕೆ.ಎನ್ ಮಂಜುನಾಥ್, ಜಂಟಿ ಕಾರ್ಯದರ್ಶಿಗಳಾದ ಮಂಜುನಾಥ್, ಶ್ರೀರಾಮ್, ನಿರ್ದೇಶಕರಾದ ಎಸ್ ಚೌಡಪ್ಪ, ವಿಜಯ್ ಮುಂತಾದವರು ಇದ್ದರು.

ಚಿತ್ರ : ಆರೋಗ್ಯ ಸಂಜೀವಿನಿ ಎಲ್ಲಾ ಖಾಸಗಿ ಆಸ್ಪತ್ರೆಗಳಿಗೆ ವಿಸ್ತರಿಸುವಂತೆ ಕೋಲಾರ ಜಿಲ್ಲಾ ಸರ್ಕಾರಿ ನೌಕರರ ಸಂಘದಿಂದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಶ್ರೀನಿವಾಸ್ ಮನವಿ ಸಲ್ಲಿಸಿ ಒತ್ತಾಯಿಸಲಾಯಿತು.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande