
ಕೊಪ್ಪಳ, 27 ನವೆಂಬರ್ (ಹಿ.ಸ.) :
ಆ್ಯಂಕರ್ : ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‍ಸೆಟಿ ಸಂಸ್ಥೆಯಿದ ಉಚಿತವಾಗಿ ಹೊಲಿಗೆ ತರಬೇತಿಗಾಗಿ ಆಸಕ್ತ ಗ್ರಾಮೀಣ ಭಾಗದ ನಿರುದ್ಯೋಗಿ ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.
18 ರಿಂದ 50 ವಯೋಮಾನದ ನಿರುದ್ಯೋಗಿ ಯುವತಿರಿಗಾಗಿ ಡಿಸೆಂಬರ್ ತಿಂಗಳಲ್ಲಿ 31 ದಿನಗಳ ಉಚಿತವಾಗಿ ಹೊಲಿಗೆ ತರಬೇತಿಯನ್ನು ನೀಡಲಾಗುವುದು. ಈ ತರಬೇತಿಯು ಸ್ವ-ಉದ್ಯೋಗ ಪ್ರಾರಂಭಿಸಿ, ಸ್ವಾವಲಂಬಿ ಜೀವನ ನಡೆಸಲು ಅನುಕೂಲವಾಗಲಿವೆ. ತರಬೇತಿಯು ಊಟ ಮತ್ತು ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿದ್ದು, ಮೊದಲು ಬಂದವರಿಗೆ ಹಾಗೂ ಗ್ರಾಮೀಣ ಭಾಗದವರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ. ತರಬೇತಿಯಲ್ಲಿ ಕೌಶಲ್ಯ, ಸಾಫ್ಟ್ ಸ್ಕಿಲ್ಸ್, ಯೋಗ ತರಬೇತಿ ಹಾಗೂ ಬ್ಯಾಂಕಿನಿಂದ ಸಾಲ ಪಡೆದು ಸ್ವ-ಉದ್ಯೋಗ ಪ್ರಾರಂಭಿಸಲು ಬೇಕಾಗುವ ಜ್ಞಾನ, ಸರಕಾರಿ ಯೋಜನೆಗಳ ಮತ್ತು ಯೋಜನಾ ವರದಿ ತಯಾರಿಕೆ ಇನ್ನಿತರ ಮಾಹಿತಿಗಳನ್ನು ನೀಡಲಾಗುತ್ತದೆ.
ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ನ. 30 ಕೊನೆಯ ದಿನಾಂಕವಾಗಿದ್ದು. ಆಸಕ್ತರು ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‍ಸೆಟಿ ಸಂಸ್ಥೆಯ ನಿರ್ದೇಶಕ ಪ್ರಶಾಂತ ಬಡ್ಡಿ, ಈ ವಿಳಾಸಕ್ಕೆ ಸಂಪರ್ಕಿಸಲು ಹಾಗೂ ಸಂಸ್ಥೆಯ ವಾಟ್ಸಾಪ್ ನಂಬರ್ 9483485489ಗೆ ಊI ಎಂದು ಸಂದೇಶ ಕಳುಹಿಸುವುದರ ಮುಖಾಂತರ ತಮ್ಮ ಹೆಸರನ್ನು ನೊಂದಾಯಿಸಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ದೂರವಾಣಿ ಸಂಖ್ಯೆ: 9482188780, 9844796998, ಹಾಗೂ 9632225123 ಗೆ ಸಂಪರ್ಕಿಸಬಹುದು ಎಂದು ಸಂಸ್ಥೆಯ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್