ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ
ಇಂಗ್ಲಿಷ್
ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ


ಹೊಸಪೇಟೆ, 27 ನವೆಂಬರ್ (ಹಿ.ಸ.) :

ಆ್ಯಂಕರ್ : 2025-26ನೇ ಶೈಕ್ಷಣಿಕ ಸಾಲಿನಲ್ಲಿ ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಮಾದರಿ ಶಾಲೆ ಹೊಸಪೇಟೆ ಮತ್ತು ಕಮಲಾಪುರದಲ್ಲಿ ಸ್ಪೋಕನ್ ಇಂಗ್ಲಿಷ್ ತರಗತಿಯನ್ನು ಮಾಡಲು ಇಂಗ್ಲಿಷ್ ನುರಿತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಜಂಬುನಾಥಹಳ್ಳಿ ಆದರ್ಶ ವಿದ್ಯಾಲಯದ ಪಕ್ಕದಲ್ಲಿರುವ ಮೌಲಾನಾ ಆಜಾದ್ ಮಾದರಿ ಶಾಲೆ, ಹೊಸಪೇಟೆಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಮೊ.9945951963 ಸಂಖ್ಯೆಗೆ ಕರೆ ಮಾಡಿ ಮಾಹಿತಿ ಪಡೆಯಬಹುದು ಎಂದು ಹೊಸಪೇಟೆಯ ಮೌಲಾನಾ ಆಜಾದ್ ಮಾದರಿ ಶಾಲೆಯ ಪ್ರಾಂಶುಪಾಲರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande