
ಬಳ್ಳಾರಿ, 27 ನವೆಂಬರ್ (ಹಿ.ಸ.) :
ಆ್ಯಂಕರ್ : ಬಳ್ಳಾರಿ ಲೋಕಸಭಾ ಕ್ಷೇತ್ರದ ಸಂಸದರಾದ ಈ.ತುಕಾರಾಮ್ ಅವರು ನಾಳೆ ಬಳ್ಳಾರಿಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.
ನಾಳೆ ಬೆಳಿಗ್ಗೆ 10.30 ಗಂಟೆಗೆ ಬಳ್ಳಾರಿ ಹೊರವಲಯದ ಹೊಸ ಬೈಪಾಸ್‍ಯ ವೇಣಿವೀರಾಪುರ ಹತ್ತಿರದ ರಾಷ್ಟ್ರೀಯ ಹೆದ್ದಾರಿ (ಎನ್‍ಹೆಚ್-67) ಯೋಜನೆಯಡಿ ವೇಣಿವೀರಾಪುರ ದಿಂದ ಹಗರಿ ವರೆಗೆ ನಿರ್ಮಿಸಲಾದ ಬಳ್ಳಾರಿ ಬೈಪಾಸ್ ರಸ್ತೆಯ ಉದ್ಘಾಟನೆ ನೆರವೇರಿಸುವರು.
ಮಧ್ಯಾಹ್ನ 12 ಗಂಟೆಗೆ ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಹತ್ತಿರ 2024-25ನೇ ಸಾಲಿನ ಸಂಸದರ 10 ಲಕ್ಷ ರೂ. ಅನುದಾನದಲ್ಲಿ ಬಸ್ ತಂಗುದಾಣದ ಭೂಮಿಪೂಜೆಯಲ್ಲಿ ಭಾಗವಹಿಸುವರು.
ಬಳಿಕ ಮಧ್ಯಾಹ್ನ 12.30 ಕ್ಕೆ ಜಿಲ್ಲಾ ಆಸ್ಪತ್ರೆಯಲ್ಲಿ ಎನ್.ಎಂ.ಡಿ.ಸಿ ಸಿ.ಎಸ್.ಆರ್ 1200 ಲಕ್ಷ ರೂ. ಅನುದಾನದಲ್ಲಿ ಎಂ.ಆರ್.ಐ ಸ್ಕ್ಯಾನಿಂಗ್ ಸೆಂಟರ್ ಉದ್ಘಾಟನೆ ಮಾಡುವರು. ನಂತರ ನಗರದ ರಾಘವೇಂದ್ರ ಕಾಲೋನಿಯಲ್ಲಿ 2024-25ನೇ ಸಾಲಿನ ಸಂಸದರ 25 ಲಕ್ಷ ರೂ. ಅನುದಾನದಲ್ಲಿ ನಿರ್ಮಿಸಿರುವ ಬಳ್ಳಾರಿಯ ಆದರ್ಶ ಪಾರ್ಕ್‍ನಲ್ಲಿ ಪೇವರ್ಸ್ ಅಳವಡಿಕೆ ಮತ್ತು ಪಿರಾಮಿಡ್ ಯೋಗಕೇಂದ್ರಕ್ಕೆ ಭೇಟಿ ನೀಡುವರು.
ನಂತರ ಮಧ್ಯಾಹ್ನ 02.15 ಗಂಟೆಗೆ ನಗರದ ಜಿಲ್ಲಾ ಪಂಚಾಯತ್ ಕಚೇರಿ ಆವರಣದಲ್ಲಿ ವಿಶ್ವಕರ್ಮ ಯೋಜನೆಯಡಿ ಫಲಾನುಭವಿಗಳಿಗೆ ಕಿಟ್ ವಿತರಣೆ ಮಾಡುವರು. ಬಳಿಕ ಜಿಪಂ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಬಳ್ಳಾರಿ ಜಿಲ್ಲಾ ಮಟ್ಟದ ಲೀಡ್ ಬ್ಯಾಂಕ್‍ನ ತ್ರೈಮಾಸಿಕ ಡಿ.ಎಲ್.ಆರ್.ಸಿ/ಡಿ.ಸಿ.ಸಿ ಸಭೆಯಲ್ಲಿ ಭಾಗವಹಿಸುವರು ಎಂದು ಸಂಸದರ ಆಪ್ತ ಸಹಾಯಕರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್