
ಹೊಸಪೇಟೆ, 27 ನವೆಂಬರ್ (ಹಿ.ಸ.) :
ಆ್ಯಂಕರ್ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ವಿಜಯನಗರ ಮತ್ತು ಸುರಭಿ ವಿದ್ಯಾನಿಕೇತನ ಶಾಲೆ ಮತ್ತು ಕಾಲೇಜು ಸಹಯೋಗದಲ್ಲಿ ನಾಳೆಯಿಂದ 30 ರವರೆಗೆ, ಸುರಭಿ ವಿದ್ಯಾನಿಕೇತನ ಶಾಲೆ ಮತ್ತು ಕಾಲೇಜಿನಲ್ಲಿ ರಾಜ್ಯಪಾಲರ ಪ್ರಶಸ್ತಿ ಪಡೆಯಲು ಅರ್ಹ ಸ್ಕೌಟ್ಸ್ ಮತ್ತು ಗೈಡ್ಸ್‍ಗಳಿಗೆ ರಾಜ್ಯ ಮಟ್ಟದ ರಾಜ್ಯ ಪುರಸ್ಕಾರ ಪರೀಕ್ಷಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಕಾರ್ಯದರ್ಶಿ ಕೆ.ರಾಜಶೇಖರ ಅವರು ತಿಳಿಸಿದ್ದಾರೆ.
ಪರೀಕ್ಷಾ ಶಿಬಿರದಲ್ಲಿ ಬಳ್ಳಾರಿ, ಕೊಪ್ಪಳ, ವಿಜಯನಗರ ಜಿಲ್ಲೆಯ ವಿದ್ಯಾರ್ಥಿಗಳು ಸೇರಿದಂತೆ 500 ಕ್ಕೂ ಹೆಚ್ಚು ಮಕ್ಕಳು ಭಾಗವಹಿಸಲಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್