ನೋಂದಾಯಿತ ಸಾಂಸ್ಕ್ರತಿಕ ಸಂಘ, ಸಂಸ್ಥೆಗಳಿಗೆ ಧನ ಸಹಾಯಕ್ಕಾಗಿ ಅರ್ಜಿ ಆಹ್ವಾನ
ಹೊಸಪೇಟೆ, 27 ನವೆಂಬರ್ (ಹಿ.ಸ.) : ಆ್ಯಂಕರ್ : ರಾಜ್ಯಾದ್ಯಂತ ಹಾಗೂ ಹೊರ ರಾಜ್ಯಗಳಲ್ಲಿ ಕ್ರಿಯಾತ್ಮಕ ಸಾಂಸ್ಕøತಿಕ ಚಟುವಟಿಕೆಗಳ ಮೂಲಕ ನಾಡಿನ ಭಾಷೆ, ಸಂವರ್ಧನೆ, ಕಲೆ, ಸಾಹಿತ್ಯ, ಸಂಗೀತ, ಜಾನಪದ, ನೃತ್ಯ ಕಲಾಪ್ರಕಾರಗಳನ್ನು ಉಳಿಸಿ ಬೆಳೆಸುವ ಸಲುವಾಗಿ ಕಾರ್ಯನಿರ್ವಹಿಸುತ್ತಿರುವ ನೋಂದಾಯಿತ ಸಂಘ-ಸಂಸ್ಥ
ನೋಂದಾಯಿತ ಸಾಂಸ್ಕ್ರತಿಕ ಸಂಘ, ಸಂಸ್ಥೆಗಳಿಗೆ ಧನ ಸಹಾಯಕ್ಕಾಗಿ ಅರ್ಜಿ ಆಹ್ವಾನ


ಹೊಸಪೇಟೆ, 27 ನವೆಂಬರ್ (ಹಿ.ಸ.) :

ಆ್ಯಂಕರ್ : ರಾಜ್ಯಾದ್ಯಂತ ಹಾಗೂ ಹೊರ ರಾಜ್ಯಗಳಲ್ಲಿ ಕ್ರಿಯಾತ್ಮಕ ಸಾಂಸ್ಕøತಿಕ ಚಟುವಟಿಕೆಗಳ ಮೂಲಕ ನಾಡಿನ ಭಾಷೆ, ಸಂವರ್ಧನೆ, ಕಲೆ, ಸಾಹಿತ್ಯ, ಸಂಗೀತ, ಜಾನಪದ, ನೃತ್ಯ ಕಲಾಪ್ರಕಾರಗಳನ್ನು ಉಳಿಸಿ ಬೆಳೆಸುವ ಸಲುವಾಗಿ ಕಾರ್ಯನಿರ್ವಹಿಸುತ್ತಿರುವ ನೋಂದಾಯಿತ ಸಂಘ-ಸಂಸ್ಥೆಗಳಿಗೆ ಧನಸಹಾಯ ನೀಡಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸಿದ್ಧಲಿಂಗೇಶ ರಂಗಣ್ಣನವರ್ ತಿಳಿಸಿದ್ದಾರೆ.

ಕಲಾವಿದರಿಗೆ ವಾದ್ಯ ಪರಿಕರ ಮತ್ತು ವೇಷಭೂಷಣಗಳ ಖರೀದಿಗೆ ಸಹಾಯಧನ ಹಾಗೂ ಚಿತ್ರಕಲೆ, ಶಿಲ್ಪ ಕಲಾಕೃತಿಗಳ ಪ್ರದರ್ಶನಕ್ಕೆ ಸಹಾಯಧನ ನೀಡಲು 2025-26 ನೇ ಸಾಲಿನ ಸಾಮಾನ್ಯ, ಪರಿಶಿಷ್ಠ ಜಾತಿ, ಪರಿಶಿಷ್ಠ ಪಂಗಡ ಉಪಯೋಜನೆಯಡಿ ಡಿಸೆಂಬರ್.01 ರಿಂದ 30 ರವರೆಗೆ ಕಾಲಾವಕಾಶ ನೀಡಲಾಗಿದೆ.

ಅರ್ಹ ಆಸಕ್ತರು Sevasindhu.karnataka.gov.in ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ 08024410547, 8792662814, 8792662816, 08022213530, 9986837037, 9900337738, 9448436877, 9480197511, 9916600027, 08022241325 ಸಂಖ್ಯೆಯನ್ನು ಹಾಗೂ ವಿಜಯನಗರ ಜಿಲ್ಲೆಯ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಸೇವಾಸಿಂಧು ಅಯಾ ಜಿಲ್ಲೆಯ ವ್ಯವಸ್ಥಾಪಕರನ್ನು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಯೊಳಗೆ ಸಂಪರ್ಕಿಸಬಹುದಾಗಿದೆ.

ನಿಗದಿತ ದಿನಾಂಕದ ನಂತರ ಸಲ್ಲಿಸುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಹಾಗೂ ಅರ್ಜಿಗಳನ್ನು ನೇರವಾಗಿ ಇಲಾಖೆಯಲ್ಲಿ ಸ್ವೀಕರಿಸುವುದಿಲ್ಲ ಎಂದು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande