ಮತದಾರರ ಕರಡು ಪಟ್ಟಿ ಪ್ರಕಟ ; ಆಕ್ಷೇಪಣೆಗೆ ಅವಕಾಶ
ಹೊಸಪೇಟೆ, 27 ನವೆಂಬರ್ (ಹಿ.ಸ.) : ಆ್ಯಂಕರ್ : ಭಾರತ ಚುನಾವಣಾ ಆಯೋಗದ ಸೆಪ್ಟಂಬರ್.12 ರ ವೇಳಾಪಟ್ಟಿಯ ಅನುಗುಣವಾಗಿ ನವೆಂಬರ್ 25 ಕರ್ನಾಟಕ ವಿಧಾನ ಪರಿಷತ್ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಜಿಲ್ಲಾ ಸಹಾಯಕ ಚುನಾವಣಾಧಿಕಾರಿಗಳು ಹಾಗೂ ಸಹಾಯಕ ಮತದ
ಮತದಾರರ ಕರಡು ಪಟ್ಟಿ ಪ್ರಕಟ ; ಆಕ್ಷೇಪಣೆಗೆ ಅವಕಾಶ


ಹೊಸಪೇಟೆ, 27 ನವೆಂಬರ್ (ಹಿ.ಸ.) :

ಆ್ಯಂಕರ್ : ಭಾರತ ಚುನಾವಣಾ ಆಯೋಗದ ಸೆಪ್ಟಂಬರ್.12 ರ ವೇಳಾಪಟ್ಟಿಯ ಅನುಗುಣವಾಗಿ ನವೆಂಬರ್ 25 ಕರ್ನಾಟಕ ವಿಧಾನ ಪರಿಷತ್ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಜಿಲ್ಲಾ ಸಹಾಯಕ ಚುನಾವಣಾಧಿಕಾರಿಗಳು ಹಾಗೂ ಸಹಾಯಕ ಮತದಾರ ನೋಂದಾಣಾಧಿಕಾರಿ ಕವಿತಾ ಎಸ್.ಮನ್ನಿಕೇರಿ ತಿಳಿಸಿದ್ದಾರೆ.

ಕರಡು ಮತದಾರರ ಪಟ್ಟಿಯ ಭೌತಿಕ ಪ್ರತಿಯು ಸಂಬಂಧಪಟ್ಟ ಕ್ಷೇತ್ರದ ವ್ಯಾಪ್ತಿಯ ಎಲ್ಲಾ ಸಹಾಯಕ ಮತದಾರರ ನೋಂದಣಾಧಿಕಾರಿಗಳಾದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ, ಆಯುಕ್ತರು ಮಹಾನಗರ ಪಾಲಿಕೆ ಹಾಗೂ ತಹಸೀಲ್ದಾರ ಕಚೇರಿಯಲ್ಲಿ ಲಭ್ಯವಿದ್ದು ಮತದಾರರು ಪರಿಶೀಲಿಸಿಕೊಳ್ಳಬಹುದಾಗಿದೆ.

ಸರ್ಕಾರದ ಅಧಿಕೃತ ಅಂರ್ತಜಾಲದಲ್ಲಿಯೂ ಸಹ ಮಾಹಿತಿಗಾಗಿ ಲಭ್ಯವಿದೆ. ಕರಡು ಮತದಾರರ ಪಟ್ಟಿಯಲ್ಲಿ ಆಕ್ಷೇಪಣೆಗಳೇನಾದರೂ ಇದ್ದಲ್ಲಿ ಸಂಬಂಧಪಟ್ಟ ಮತದಾರರು ಲಿಖಿತವಾಗಿ ಆಯಾ ತಾಲ್ಲೂಕು ಸಹಾಯಕ ಮತದಾರರ ನೋಂದಣಾಧಿಕಾರಿಗಳಿಗೆ (ತಹಶೀಲ್ದಾರರು) ಡಿಸೆಂಬರ್.10 ರೊಳಗಾಗಿ ಆಕ್ಷೇಪಣೆಯನ್ನು ಸಲ್ಲಿಸಬಹುದು.

ಇದೊಂದು ನಿರಂತರ ನೋಂದಣಿ ಪ್ರಕ್ರಿಯೆಯಾಗಿರುವ ಹಿನ್ನೆಲೆಯಲ್ಲಿ, ನಾಮಪತ್ರ ಸಲ್ಲಿಸುವ ಕೊನೆಯ ದಿನಾಂಕದವರೆಗೂ ಅರ್ಹ ಮತದಾರರು ಅವಶ್ಯಕ ದಾಖಲೆಗಳೊಂದಿಗೆ ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ನೋಂದಾಯಿಸಿಕೊಳ್ಳಲು ಅವಕಾಶವಿರುತ್ತದೆ ಎಂದು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande