ಗಾಂಧಿ ಗ್ರಾಮ ಪುರಸ್ಕಾರಕ್ಕೆ ಟಿ.ಗೊಲ್ಲಹಳ್ಳಿ ಗ್ರಾಪಂ ಆಯ್ಕೆ
ಗಾಂಧಿ ಗ್ರಾಮ ಪುರಸ್ಕಾರಕ್ಕೆ ಟಿ.ಗೊಲ್ಲಹಳ್ಳಿ ಗ್ರಾಪಂ ಆಯ್ಕೆ
ಚಿತ್ರ ; ಕೆಜಿಎಫ್ ತಾಲ್ಲೂಕಿನ ಬೇತಮಂಗಲ ಸಮೀಪದ ಟಿ.ಗೊಲ್ಲಹಳ್ಳಿ ಗ್ರಾಮ ಪಂಚಾಯಿತಿ ಕಚೇರಿ.


ಕೋಲಾರ, ೨೭ ನವೆಂಬರ್(ಹಿ.ಸ.) :

ಆ್ಯಂಕರ್ : ಕರ್ನಾಟಕ ರಾಜ್ಯದ ಪಂಚಾಯತ್ ರಾಜ್ ಇಲಾಖೆಯಿಂದ ಪ್ರತಿ ವರ್ಷ ನೀಡುವಂತಹ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಈ ಭಾರಿ ಕೆಜಿಎಫ್ ತಾಲ್ಲೂಕಿನ ಟಿ.ಗೊಲ್ಲಹಳ್ಳಿ ಗ್ರಾಮ ಪಂಚಾಯಿತಿಯನ್ನು ಆಯ್ಕೆ ಮಾಡಿ ಆದೇಶ ಹೊರಡಿಸಲಾಗಿದೆ.

ಕೆಜಿಎಫ್ ತಾಲೂಕಿನ ಒಟ್ಟು ೧೬ ಗ್ರಾಮ ಪಂಚಾಯಿತಿಗಳ ಪೈಕಿ ಟಿ. ಗೊಲ್ಲಹಳ್ಳಿ ಗ್ರಾಮ ಪಂಚಾಯತಿಯನ್ನು ೨೦೨೩-೨೪ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆ ಮಾಡುವ ಮೂಲಕ ರಾಜ್ಯದ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರಂಭಕ್ಕೆ ಆಹ್ವಾನ ನೀಡಲಾಗಿದೆ.

ಕೋಲಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹನ ಅಧಿಕಾರಿಗಳು ಟಿ.ಗೋಲ್ಲಹಳ್ಳಿ ಗ್ರಾಮ ಪಂಚಾಯತಿಯ ಅಧ್ಯಕ್ಷರಿಗೆ ಹಾಗೂ ಅಭಿವೃದ್ಧಿ ಅಧಿಕಾರಿಗಳು ಡಿಸೆಂಬರ್ ೦೧ ರಂದು ನಡೆಯುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ತಮ್ಮ ಆದೇಶದ ಮೂಲಕ ಆಹ್ವಾನ ಕಳಿಸಿದ್ದಾರೆ.

ಟಿ.ಗೊಲ್ಲಹಳ್ಳಿ ಗ್ರಾಮ ಪಂಚಾಯಿತಿಯ ಆಡಳಿತ ಮಂಡಳಿಯು ನರೇಗಾ ಯೋಜನೆ, ಒಂದನೇ ಹಣಕಾಸು ಹಾಗೂ ಇತರೆ ಮೂಲಗಳಿಂದ ಬರುವಂತಹ ಸಂಪನ್ಮೂಲದಲ್ಲಿ ಗ್ರಾಮ ಪಂಚಾಯಿತಿಯ ಎಲ್ಲಾ ಗ್ರಾಮಗಳಲ್ಲೂ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿರುವ ಫಲವಾಗಿ ಗಾಂಧಿ ಗ್ರಾಮ ಪುರಸ್ಕಾರ ಲಭಿಸಲಾಗಿದೆ.

ಇತ್ತೀಚಿಗೆ ಗ್ರಾಮ ಪಂಚಾಯಿತಿಗೆ ನೂತನವಾಗಿ ಸಭಾಂಗಣ ನಿರ್ಮಾಣ, ಅಂಗನವಾಡಿ ಕೇಂದ್ರಗಳು, ಅಡುಗೆ ಕೋಣೆ ಸೇರಿದಂತೆ ಇತರೆ ಕೈಗೊಂಡಿರುವ ಅಭಿವೃದ್ಧಿ ಅಭಿವೃದ್ಧಿ ಕಾಮಗಾರಿಗಳನ್ನು ಗುರುತಿಸಿ ಸರ್ಕಾರ ಪುರಸ್ಕಾರ ನೀಡಿದೆ.

ಟಿ.ಗೊಲ್ಲಹಳ್ಳಿ ಗ್ರಾಮ ಪಂಚಾಯಿತಿಯ ಆಡಳಿತ ಮಂಡಳಿಯು ಕೇವಲ ಚುನಾವಣೆಯ ಸಮಯದಲ್ಲಿ ಮಾತ್ರ ರಾಜಕೀಯ ಮಾಡುತ್ತೇವೆ, ಚುನಾವಣೆ ಮುಗಿದ ನಂತರ ಎಲ್ಲರೂ ಒಂದೇ ಎಂಬ ಭಾವನೆಯಲ್ಲಿ ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸಿರುವ ಫಲವಾಗಿ ಪ್ರಶಸ್ತಿ ಸಿಕ್ಕಿದೆ, ಇದಕ್ಕಾಗಿ ಎಲ್ಲಾ ಸದಸ್ಯರಿಗೂ ಟಿ.ಗೊಲ್ಲಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಅಯ್ಯಪಲ್ಲಿ ಮಂಜುನಾಥ್ ಕೃತಜ್ಞತೆ ಸಲ್ಲಿಸಿದರು.

ಚಿತ್ರ ; ಕೆಜಿಎಫ್ ತಾಲ್ಲೂಕಿನ ಬೇತಮಂಗಲ ಸಮೀಪದ ಟಿ.ಗೊಲ್ಲಹಳ್ಳಿ ಗ್ರಾಮ ಪಂಚಾಯಿತಿ ಕಚೇರಿ.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande