ಆರ್.ಟಿ.ಇ ಕಾಯ್ದೆ ಪ್ರಾಮಾಣಿಕವಾಗಿ ಅನುಷ್ಠಾನಗೊಳಿಸಿ : ಶಶಿಧರ ಕೋಸಂಬೆ
ಬಳ್ಳಾರಿ, 27 ನವೆಂಬರ್ (ಹಿ.ಸ.) : ಆ್ಯಂಕರ್ : ಜಿಲ್ಲೆಯಲ್ಲಿ ಉಚಿತ ಮತ್ತು ಕಡ್ಡಾಯ ಶಿಕ್ಷಣ ಕಾಯ್ದೆಯನ್ನು ಪ್ರಾಮಾಣಿಕವಾಗಿ ಅನುಷ್ಠಾನಗೊಳಿಸಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ ಕೋಸಂಬೆ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ನಗರದ ಜಿಲ್ಲಾ ಪಂಚಾಯತ್‍ನ
ಆರ್.ಟಿ.ಇ ಕಾಯ್ದೆ ಪ್ರಾಮಾಣಿಕವಾಗಿ ಅನುಷ್ಠಾನಗೊಳಿಸಿ : ಶಶಿಧರ ಕೋಸಂಬೆ


ಬಳ್ಳಾರಿ, 27 ನವೆಂಬರ್ (ಹಿ.ಸ.) :

ಆ್ಯಂಕರ್ : ಜಿಲ್ಲೆಯಲ್ಲಿ ಉಚಿತ ಮತ್ತು ಕಡ್ಡಾಯ ಶಿಕ್ಷಣ ಕಾಯ್ದೆಯನ್ನು ಪ್ರಾಮಾಣಿಕವಾಗಿ ಅನುಷ್ಠಾನಗೊಳಿಸಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ ಕೋಸಂಬೆ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ನಗರದ ಜಿಲ್ಲಾ ಪಂಚಾಯತ್‍ನ ಹಳೆಯ ನಜೀರ್ ಸಾಬ್ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಆರ್.ಟಿ.ಇ ಕಾಯ್ದೆ ಅನುಷ್ಠಾನ ಕುರಿತು ಶಿಕ್ಷಣ ಇಲಾಖೆಯ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು.

ಉಚಿತ ಮತ್ತು ಕಡ್ಡಾಯ ಶಿಕ್ಷಣ ಕಾಯ್ದೆಯು 6 ರಿಂದ 14 ವಷರ್À ವಯಸ್ಸಿನ ಎಲ್ಲಾ ಮಕ್ಕಳಿಗೆ ಉಚಿತ ಮತ್ತು ಕಡ್ಡಾಯ ಶಿಕ್ಷಣವನ್ನು ಮೂಲಭೂತ ಹಕ್ಕು ಎಂದು ಗುರುತಿಸುತ್ತದೆ. ಎಲ್ಲಾ ಮಕ್ಕಳಿಗೆ ಶಿಕ್ಷಣದ ಪ್ರವೇಶಕ್ಕೆ ಇರುವ ಆರ್ಥಿಕ ಅಥವಾ ಇತರ ಅಡೆತಡೆಗಳನ್ನು ನಿವಾರಿಸುವುದು ಇದರ ಪ್ರಮುಖ ಉದ್ದೇಶವಾಗಿದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಶಿಕ್ಷಣ ಇಲಾಖೆಯ ಅಧಿಕಾರಿಗಳು ಆರ್.ಟಿ.ಇ ಕಾಯ್ದೆ ಅನುಷ್ಠಾನಕ್ಕಿರುವ ನಿಯಮಾವಳಿಗಳ ಬಗ್ಗೆ ಅರಿವು ಇಲ್ಲದೇ ಇರುವುದು ದುರ್ದೈವದ ಸಂಗತಿ. ಹಾಗಾಗಿ ಅಧಿಕಾರಿಗಳು ಕಾಯ್ದೆಯ ಸಮಗ್ರ ಮಾಹಿತಿ ಹೊಂದುವ ಮೂಲಕ ಮಕ್ಕಳ ಶಿಕ್ಷಣ ಭವಿಷ್ಯಕ್ಕೆ ಕಾರಣೀಭೂತರಾಗಬೇಕು ಎಂದರು.

ಜಿಲ್ಲೆಯಲ್ಲಿ 2021-22 ನೇ ಸಾಲಿನಲ್ಲಿ ಕರೋನಾ ಸಂದರ್ಭದಲ್ಲಿ ಮಕ್ಕಳಿಗೆ ಪೌಷ್ಟಿಕ ಆಹಾರ ನೀಡಲು ಸರ್ಕಾರದಿಂದ ಅನುದಾನ ನೀಡಿದ್ದು, ಮಕ್ಕಳಿಗಾಗಿ ಪೂರ್ಣ ಪ್ರಮಾಣದಲ್ಲಿ ಖರ್ಚು ಮಾಡಲಾಗಿದೆಯೇ? ಮಾಹಿತಿ ಎಲ್ಲಿ? ಎಲ್ಲಾ ಶಾಲೆಗಳಲ್ಲಿ ಉಳಿದುಕೊಂಡಿರುವ ಅನುದಾನ ಎಷ್ಟು? ಶಾಲೆಗಳ ಬ್ಯಾಂಕ್ ಖಾತೆ ಪರಿಶೀಲಿಸಿಲ್ಲವೇ? ಎಂದು ಮಧ್ಯಾಹ್ನ ಬಿಸಿಯೂಟದ ಯೋಜನಾಧಿಕಾರಿಗಳ ಮೇಲೆ ಗರಂ ಆದ ಅವರು, ಕೂಡಲೇ ಮಾಹಿತಿ ನೀಡಬೇಕು. ಸರ್ಕಾರ ಮಕಳಿಗಾಗಿಯೇ ನೀಡಿರುವ ಹಣವಿದೆ. ಮಕ್ಕಳಿಗೆ ತಲುಪಿಸುವ ಕಾರ್ಯ ಏಕೆ ಮಾಡಲಿಲ್ಲ, ಇದಕ್ಕೆ ಯಾರು ಹೊಣೆ ಎಂದು ಕಳವಳ ವ್ಯಕ್ತಪಡಿಸಿದರು.

ಜಿಲ್ಲೆಯಲ್ಲಿ 2021-22 ರಿಂದ 31.03.2025 ರ ಅಂತ್ಯಕ್ಕೆ ಶಾಲೆಗಳ ಎಲ್ಲಾ ಖಾತೆಗಳಲ್ಲಿ ಸೇರಿ ಒಟ್ಟು 2,24,71,138 ಹಣವಿದೆ ಎಂದು ಮಧ್ಯಾಹ್ನ ಬಿಸಿಯೂಟದ ಯೋಜನಾಧಿಕಾರಿಗಳು ಸಭೆಯ ಗಮನಕ್ಕೆ ತಂದರು. ಇದಕ್ಕೆ ಪ್ರತಿಕ್ರಿಯಿಸಿದ ಅಧ್ಯಕ್ಷರು, ಈ ಹಣ ಮಕ್ಕಳಿಗೆ ತಲುಪಬೇಕು, ಇಲ್ಲವೇ ಸರ್ಕಾರಕ್ಕೆ ತಲುಪಬೇಕು ಎಂದರು.

ಕಂಪ್ಲಿ ತಾಲ್ಲೂಕಿನ ರಾಮಸಾಗರ ಗ್ರಾಮದ ಸರ್ಕಾರಿ ಶಾಲೆಯೊಂದರಲ್ಲಿ ಶಾಲಾ ಮುಖ್ಯೋಪಾಧ್ಯರು, ಎಸ್.ಡಿ.ಎಂ.ಸಿ ಸಮಿತಿ ಒಳಗೊಂಡು ಶಾಲಾ ಪ್ರವೇಶಾತಿ ನೆಪದಲ್ಲಿ ಹಣ ವಸೂಲಾತಿ ಮಾಡಲು ಅವಕಾಶವಿದೆಯೇ? ಎಂದು ಡಿಡಿಪಿಐ ಪ್ರಶ್ನಿಸಿದರು. ಇದರ ಸಮಗ್ರ ತನಿಖೆ ನಡೆಸಿ ಆಯೋಗಕ್ಕೆ ವರದಿ ಸಲ್ಲಿಸಬೇಕು ಎಂದು ಖಡಕ್ ಸೂಚನೆ ನೀಡಿದರು.

ಅದೇ ರೀತಿಯಾಗಿ ಮೆಟ್ರಿ ಗ್ರಾಮದಲ್ಲಿ ಭೇಟಿ ನೀಡಿದಾಗ ಒಂದೇ ಶಾಲೆಯಲ್ಲಿ ಪ್ರಾಥಮಿಕ ಹಂತದ 5 ಮಕ್ಕಳು, ಪ್ರೌಢ ಹಂತದ 12 ಮಕ್ಕಳು ಗೈರಾಗಿರುವುದು ಕಂಡುಬಂದಿದ್ದು, ಕಾರಣವೇನು? ಇದೇ ತರಹ ಜಿಲ್ಲೆಯ ಶಾಲೆಗಳಲ್ಲಿ ನಡೆಯುವ ಕಥೆ ಏನು? ಮಕ್ಕಳಿಗೆ ಏನಾದರೂ ಘಟನೆಗಳು ಸಂಭವಿಸಿದಲ್ಲಿ ಯಾರೂ ಉತ್ತರ ನೀಡಬೇಕು.

ಶಿಕ್ಷಕರು ಮನೆ ಭೇಟಿ ನಡೆಸಬೇಕು. ಶಾಲೆಗೆ ಕರೆತರುವ ಪ್ರಯತ್ನ ಮಾಡಬೇಕು. ಶಾಲೆಯಲ್ಲಿ ಕುಡಿಯಲು ನೀರಿನ ವ್ಯವಸ್ಥೆ ಇಲ್ಲ, ಆಹಾರಧಾನ್ಯಗಳಲ್ಲಿ ಹುಳುಗಳು ಕಂಡುಬಂದಿವೆ, ಶೌಚಾಲಯ ವ್ಯವಸ್ಥೆ ಇಲ್ಲ, ಈ ಕೂಡಲೇ ಕ್ರಮವಹಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಿದರು.

ಜಿಲ್ಲೆಯಲ್ಲಿ ಕಳೆದ ವರ್ಷದಲ್ಲಿ ಪ್ರೌಢ ಶಾಲೆಗಳಲ್ಲಿ (9 ಮತ್ತು 10 ತರಗತಿ) ಉತ್ತೀರ್ಣರಾದ ವಿದ್ಯಾರ್ಥಿಗಳಲ್ಲಿ ಸುಮಾರು 9,500 ವಿದ್ಯಾರ್ಥಿಗಳು ಹೊರಗುಳಿದಿದ್ದು, ಹಾಜರಾತಿಯಲ್ಲಿ ಮಾತ್ರ ಪ್ರೆಸೆಂಟ್ ಇದ್ದಾರೆ, ಆದರೆ ದೈಹಿಕವಾಗಿ ಶಾಲೆಯಲ್ಲಿಲ್ಲ. ಸರ್ಕಾರದಿಂದ ಅವರಿಗೆ ನೀಡಲಾಗುತ್ತಿರುವ ಸಮವಸ್ತ್ರ, ಶೂ-ಸಾಕ್ಸ್, ಊಟ, ಮೊಟ್ಟೆ, ಬಾಳೆಹಣ್ಣು ಎಲ್ಲಿಗೆ ಹೋಗುತ್ತಿವೆ ಎಂದು ಪ್ರಶ್ನಿಸಿದ ಅವರು, ಈ ಕುರಿತು ಆಯುಕ್ತರೊಂದಿಗೆ ಚರ್ಚಿಸಲಾಗುವುದು ಎಂದು ತಿಳಿಸಿದರು.

ಶಾಲೆಗಳಲ್ಲಿ ಮಕ್ಕಳ ಆಧಾರ್ ಸೀಡಿಂಗ್ ಪ್ರಕ್ರಿಯೆ ಸಾಕಷ್ಟು ಬಾಕಿಯಿದೆ. ಇದರಿಂದ ಅವರಿಗೆ ವಿದ್ಯಾರ್ಥಿವೇತನ ಸೇರಿದಂತೆ ಇತರೆ ಕಾರ್ಯಗಳಿಗೆ ಸಮಸ್ಯೆಯಾಗಲಿದೆ. ಜಿಲ್ಲೆಯಲ್ಲಿ ಆಧಾರ್ ಕಾರ್ಡ್ ಪಡೆಯಲು ಜನ್ಮ ಪ್ರಮಾಣ ಪತ್ರ ವಿತರಣೆಗೆ ಇರುವ ತೊಡಕುಗಳ ಕುರಿತು ಡಿಸಿ ಮತ್ತು ಜಿಪಂ ಸಿಇಒ ಗಮನಕ್ಕೆ ತಂದು ಚರ್ಚಿಸಬೇಕು. ಇದರಿಂದ ಮಕ್ಕಳಿಗೆ ಸಾಕಷ್ಟು ಅನುಕೂಲವಾಗಲಿದೆ ಎಂದರು.

ಆರ್.ಬಿ.ಎಸ್.ಕೆ ತಂಡದ ಅಧಿಕಾರಿಗಳು ಜಿಲ್ಲಾ ಆರೋಗ್ಯಾಧಿಕಾರಿಗಳೊಂದಿಗೆ ಚರ್ಚಿಸಿ, ನಿಯಮಿತವಾಗಿ ಶಾಲೆಗಳಿಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ತಪಾಸಣೆ ನಡೆಸಬೇಕು. ಆಯೋಗಕ್ಕೆ ಜಿಪಿಎಸ್ ಪೆÇೀಟೋ ಸಹಿತ ಮಾಹಿತಿ ಸಲ್ಲಿಸಬೇಕು ಎಂದು ತಿಳಿಸಿದರು.

ಶಾಲಾ ಶಿಕ್ಷಣ ಇಲಾಖೆಯ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ನಿಯಮಿತವಾಗಿ ಶಾಲೆಗಳಿಗೆ ಭೇಟಿ ನೀಡಬೇಕು. ಮಕ್ಕಳೊಂದಿಗೆ ಸಮಸ್ಯೆಗಳ ಕುರಿತು ಚರ್ಚಿಸಿ ಬೇಕಾದ ವ್ಯವಸ್ಥೆ ಕಲ್ಪಿಸಬೇಕು. ಇದು ಅಧಿಕಾರಿಗಳ ಕರ್ತವ್ಯವಾಗಿದೆ ಎಂದು ತಿಳಿಸಿದರು.

ಕಳೆದ ಸಭೆಯಲ್ಲಿ ನಡೆದ ಚರ್ಚೆಗಳ ಕುರಿತು ನಡಾವಳಿಗಳ ಮಾಹಿತಿ ದಾಖಲಿಸದೇ ಇರುವುದರ ಕುರಿತು ಅಧ್ಯಕ್ಷರು ಅಸಮಾಧಾನ ವ್ಯಕ್ತಪಡಿಸಿದರು.

ಸಭೆಯಲ್ಲಿ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ತ್ರಿವೇಣಿ ಪತ್ತಾರ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸುಭದ್ರಾದೇವಿ, ಶಾಲಾ ಮತ್ತು ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಉಮಾದೇವಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸದಸ್ಯರಾದ ಚೆಟ್ಲಾ ವೆಂಕಟೇಶ್, ಗೌಸಿಯಾ, ಕಾನೂನು ಪರಿವೀಕ್ಷಕ ಈಶ್ವರ್ ರಾವ್ ಸೇರಿದಂತೆ ಜಿಲ್ಲೆಯ ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಬಿಆರ್ಪಿ, ಸಿಆರ್ಪಿ, ಶಾಲಾ ಮುಖ್ಯೋಪಾಧ್ಯಾಯರು ಹಾಗೂ ಇತರರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande